ಐತಿಹಾಸಿಕ ದೇವಸ್ಥಾನದಲ್ಲಿ ಕಳ್ಳತನ

Theft at the historic temple

07-12-2017

ಬಳ್ಳಾರಿ: ಬಳ್ಳಾರಿಯ ಐತಿಹಾಸಿಕ ಶ್ರೀ ಕಲ್ಲೇಶ್ವರ ದೇಗುಲದಲ್ಲಿ ‌ಕಳ್ಳತನ ನಡೆದಿದೆ. ಬೆಳ್ಳಂಬೆಳಿಗ್ಗೆ ದುಷ್ಕರ್ಮಿಗಳು ಹುಂಡಿ ಒಡೆದು ಅಪಾರ ಪ್ರಮಾಣದ ಹಣವನ್ನು ಲಪಟಾಯಿಸಿದ್ದಾರೆ. ಬಳ್ಳಾರಿಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಅಂಬಳಿ ಗ್ರಾಮದಲ್ಲಿರುವ ದೇವಸ್ಥಾನದಲ್ಲಿ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಹುಂಡಿ ಒಡೆದು ಹಣ ದೋಚಿ, ಹುಂಡಿಯನ್ನು ಅಲ್ಲೇ ಇಟ್ಟು, ಪರಾರಿಯಾಗಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ‌ಹಗರಿಬೋಮ್ಮನ ಹಳ್ಳಿ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿ ಕಳ್ಳರಿಗಾಗಿ ಬಲೆ ಬೀಸಿದ್ದಾರೆ. ಕಳ್ಳತನದಿಂದ ಹೆದರಿರುವ ಗ್ರಾಮಸ್ಥರು ಕೂಡಲೆ ದುಷ್ಕರ್ಮಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Robbery at a temple Bellari ದುಷ್ಕರ್ಮಿ ಪರಿಶೀಲನೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ