ಶಾಸಕ ಎಂ.ಕೆ.ಸೋಮಶೇಖರ್ ಗೆ ಬಂಧನದ ಭೀತಿ

Non-bailable warrant to MK Somashekar

07-12-2017

ಮೈಸೂರು: ಶಾಸಕ ಎಂ.ಕೆ.ಸೋಮಶೇಖರ್ ವಿರುದ್ಧ ಜಾಮೀನು ರಹಿತ ಬಂಧನದ ವಾರಂಟ್ ಹೊರಡಿಸಲಾಗಿದೆ. ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಗೈರುಹಾಜರಾದ ಶಾಸಕ ಎಂ.ಕೆ.ಸೋಮಶೇಖರ್ ವಿರುದ್ಧ ಮೈಸೂರಿನ ನ್ಯಾಯಾಲಯವು ಜಾಮೀನು ರಹಿತ ಬಂಧನದ ವಾರಂಟ್ ಹೊರಡಿಸಿ ಆದೇಶಿಸಿದೆ.

ಎಂ.ಕೆ.ಸೋಮಶೇಖರ್ ಅವರು ಸುಳ್ಳು ಮಾಹಿತಿ ನೀಡಿ ಗ್ಯಾಸ್ ಏಜೆನ್ಸಿ ಪಡಿದಿರುವ ವಿಚಾರವಾಗಿ ಮಾಜಿ ಕಾರ್ಪೊರೇಟರ್ ಎಂ.ಸಿ.ಚಿಕ್ಕಣ್ಣ ಅವರು 2008ರ ಮೇ ತಿಂಗಳಲ್ಲಿ ದಾಖಲೆಗಳ ಸಹಿತ ಪತ್ರಿಕಾ ಹೇಳಿಕೆ ನೀಡಿದ್ದರು. ಇದಕ್ಕೆ ಎಂ.ಕೆ.ಸೋಮಶೇಖರ್ ಅವರು ಎಂ.ಸಿ.ಚಿಕ್ಕಣ್ಣ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿದ್ದರು.

ಎಂ.ಕೆ.ಸೋಮಶೇಖರ್ ಅವರ ಹೇಳಿಕೆಯಿಂದ ನೊಂದ ಎಂ.ಸಿ.ಚಿಕ್ಕಣ್ಣ ಅವರು ಎಂ.ಕೆ.ಸೋಮಶೇಖರ್ ವಿರುದ್ಧ ಮೈಸೂರಿನ ಜೆ.ಎಂ.ಎಫ್.ಸಿ ಮೂರನೆಯ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ದಿನಾಂಕ 04.12.2017ರ ಸೋಮವಾರದಂದು ಶಾಸಕ ಎಂ.ಕೆ.ಸೋಮಶೇಖರ್ ಅವರು ನ್ಯಾಯಾಲಯಕ್ಕೆ ಹಾಜರಾಗದ ಕಾರಣ ನ್ಯಾಯಾಲಯವು ಶಾಸಕರ ವಿರುದ್ಧ ಜಾಮೀನು ರಹಿತ ಬಂಧನದ ವಾರಂಟ್ ಹೊರಡಿಸಿ ಆದೇಶಿಸಿದೆ.

 

 


ಸಂಬಂಧಿತ ಟ್ಯಾಗ್ಗಳು

M.K somashekar crminal court ವಾರಂಟ್ ಮೊಕದ್ದಮೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ