ಅಪಘಾತ: 17 ಮಂದಿಗೆ ಗಾಯ

17 people injured in fatal accident

07-12-2017

ಮಂಗಳೂರು: ಖಾಸಗಿ ಬಸ್ ಮತ್ತು  ಕಂಟೈನರ್ ಟ್ರಕ್ ನಡುವೆ ಅಪಘಾತವಾಗಿದ್ದು, ಘಟನೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಅಲ್ಲದೇ 17 ಮಂದಿಗೆ ಗಂಭೀರ ಗಾಯಗಳಾಗಿವೆ. ಮಂಗಳೂರಿನ ನಂತೂರು ಜಂಕ್ಷನ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕವಿತಾ (50) ಎಂಬ ಮಹಿಳೆ ಮೃತಪಟ್ಟಿದ್ದು, ಈಕೆಯನ್ನು ಕೈಕಂಬದ ಗುರುಪುರ‌ದವರು ಎಂದು ಗುರುತಿಸಲಾಗಿದೆ. ಇನ್ನು ಗಾಯಾಳುಗಳನ್ನು ಮಂಗಳೂರಿನ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕದ್ರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 


ಸಂಬಂಧಿತ ಟ್ಯಾಗ್ಗಳು

Mangalore Accident ಕಂಟೈನರ್ ಜಂಕ್ಷನ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ