ದಟ್ಟ ಮಂಜು: ಬೈಕ್ ಸವಾರ ಸಾವು

Thick fog: bike rider death

07-12-2017

ಬೆಂಗಳೂರು: ಮೈಸೂರು-ಬೆಂಗಳೂರು ರಸ್ತೆಯಲ್ಲಿ ಬೈಕ್ ಸವಾರನೊರ್ವ ಅಪಘಾತಕ್ಕೀಡಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಕುಶಾಲನಗರ ಟಿಬೆಟಿಯನ್ ಕಾಲನಿಯ ತೆಂಜಿನ್ ಖೆಂಟ್ಸೆ (26) ಎಂದು ಗುರುತಿಸಲಾಗಿದೆ. ಇವರು ಬನ್ನಿಮಂಟಪದ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಅಲ್ಲಿಯೇ ಕಂಪ್ಯೂಟರ್ ತರಬೇತಿ ಪಡೆಯುತ್ತಿದ್ದರು. ಇಂದು ಮುಂಜಾನೆ ಬನ್ನಿ ಮಂಟಪದ ಬಳಿ ಬೈಕ್ ನಲ್ಲಿ ತೆರಳುವಾಗ ಮಂಜುಕವಿದ ವಾತಾವರಣವಿದ್ದು, ರಸ್ತೆಯಲ್ಲಿರುವ ಹಂಪ್ಸ್ ನೋಡದೆ ವೇಗವಾಗಿ ಚಾಲನೆ ಮಾಡಿಕೊಂಡು ಹೋದ ಪರಿಣಾಮ ವಿದ್ಯುತ್ ಕಂಬಕ್ಕೆ ಬಡಿದು ಬೈಕ್ ಗಿಂತ 100ಮೀ.ದೂರ ಮಣ್ಣು ರಾಶಿಯ ಮೇಲೆ ಬಿದ್ದು ಸಾವನ್ನಪ್ಪಿದ್ದಾರೆ. ಎನ್ ಆರ್.ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡು, ಶವವನ್ನು ಕೆ.ಆರ್.ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ