ಅನಂತ ಕುಮಾರ್ ಹೆಗಡೆ ವಿರುದ್ಧ ಎಫ್ಐಆರ್

FIR against Ananth Kumar Hegde

07-12-2017 281

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸದಂತೆ, ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಳಗಾವಿಯ ಕಿತ್ತೂರಿನಲ್ಲಿ ಸಿಎಂ ವಿರುದ್ಧ, ಅಧಿಕಾರದ ಆಸೆಗಾಗಿ ಯಾರ ಬೂಟು ಬೇಕಿದ್ರೂ ನೆಕ್ಕುತ್ತಾರೆ ಎಂಬ ಹೇಳಿಕೆಯನ್ನು ನೀಡಿದ್ದರು, ಈ ಕುರಿತಂತೆ ಜಿಲ್ಲಾ ಕಾಂಗ್ರೆಸ್ ಘಟಕ ಅನಂತ ಕುಮಾರ್ ಹೆಗಡೆ ವಿರುದ್ಧ ದೂರು ನೀಡಲು ಹೋಗಿದ್ದು, ದೂರು ಸ್ವೀಕರಿಸಲು ಪೊಲೀಸರು ನಿರಾಕರಿಸಿದ್ದರು. ಇದನ್ನು ಪ್ರಶ್ನಿಸಿ ಜಿಲ್ಲಾ ಕಾಂಗ್ರೆಸ್ ಘಟಕ, ಮೈಸೂರು ಜಿಲ್ಲಾ ನ್ಯಾಯಾಲಯದ ಮೆಟ್ಟಿಲೇರಿತ್ತು. ಇದೀಗ ಕೋರ್ಟ್ ಸೂಚನೆಯಂತೆ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.  
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ