ಪರಪ್ಪನ ಅಗ್ರಹಾರದಲ್ಲಿ ಖೈದಿ ಸಾವು !

Prisoner death in Parappana Agrahara

07-12-2017

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ವಿಚಾರಣಾಧೀನ ಖೈದಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಮ್ಮನಹಳ್ಳಿಯ ಉಲ್ಲಾಸ್ ಕುಮಾರ್(43) ಮೃತಪಟ್ಟ ಖೈದಿ. ಹೃದ್ರೋಗದಿಂದ ಬಳಲುತ್ತಿದ್ದ ಉಲ್ಲಾಸ್ ಜೈಲಿನಲ್ಲಿ ಹೃದಯಾಘಾತವಾಗಿ, ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.

ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ಬಂಧಿತನಾಗಿದ್ದ ಉಲ್ಲಾಸ್ ಕಳೆದ ನ. 29ರಂದು ಜೈಲು ಸೇರಿದ್ದ. ಖೈದಿ ಉಲ್ಲಾಸ್ ಹೃದ್ರೋಗದಿಂದ ಬಳಲುತ್ತಿದ್ದು ಜೈಲಿನ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದನು ಎಂದು ತಿಳಿದುಬಂದಿದೆ.


ಸಂಬಂಧಿತ ಟ್ಯಾಗ್ಗಳು

central Jail Prisoner ಹೃದ್ರೋಗ ಖೈದಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ