‘ಮಹಿಳೆಯರಿಗೆ ತರಬೇತಿ ಮತ್ತು ಉದ್ಯೋಗ’07-12-2017

ಬೆಂಗಳೂರು: ಮಹಿಳೆಯರಿಗೆ ಚಾಲನೆ ತರಬೇತಿ ನೀಡಿ ಇಲಾಖೆಯಲ್ಲಿ ಉದ್ಯೋಗ ದೊರಕಿಸಿಕೊಡುವ ಚಿಂತನೆಯಿದೆ ಎಂದು ಸಾರಿಗೆ ಸಚಿವ ಎಚ್.ಎಂ. ರೇವಣ್ಣ ಇಂದಿಲ್ಲಿ ಹೇಳಿದರು. ಯಲಹಂಕದ ಸಿಂಗನಾಯಕನಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಪ್ರಾದೇಶಿಕ ಸಾರಿಗೆ ಕಚೇರಿ ಉದ್ಘಾಟನೆ ಹಾಗೂ ರೈತರಿಗೆ ಟ್ರ್ಯಾಕ್ಟರ್ ಚಾಲನೆ ಪರವಾನಗಿ ವಿತರಿಸಿ ಮಾತನಾಡಿದ ಅವರು, ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಸರ್ಕಾರ ಉದ್ದೇಶಿಸಿದೆ. ಸ್ಪರ್ಧಾತ್ಮಕ ಯುಗದಲ್ಲಿ ಮಹಿಳೆಯರಿಗೆ ಹೆಚ್ಚು ಅವಕಾಶ ಕಲ್ಪಿಸಲು ಉದ್ದೇಶಿಸಲಾಗಿದೆ ಎಂದರು.

ಬಿಎಂಟಿಸಿ ಬಸ್‍ ಗಳಲ್ಲಿ ಮಹಿಳೆಯರಿಗೆ ಗುಲಾಬಿ ಬಣ್ಣದ ಆಸನ ವ್ಯವಸ್ಥೆ ಮಾಡಲಾಗುವುದು. ಅಸಂಘಟಿತ ವಲಯದ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ಹಾಗೂ ಮಹಿಳಾ ಕಾರ್ಮಿಕರಿಗೆ ಉಚಿತ ಇಂದಿರಾ ಸಾರಿಗೆ ವ್ಯವಸ್ಥೆಯನ್ನು ಅತಿ ಶೀಘ್ರದಲ್ಲಿ ಕಲ್ಪಿಸಲಾಗುವುದು ಎಂದರು.

ಬೆಂಗಳೂರಿನಲ್ಲಿ ಪ್ರತಿ ತಿಂಗಳ 2ನೇ ಭಾನುವಾರ ಟ್ರಾಫಿಕ್ ಮುಕ್ತ ದಿನ? ಆಚರಿಸಲು ನಿರ್ಧರಿಸಲಾಗಿದೆ. ಬೆಂಗಳೂರಿನಲ್ಲಿ ಹೆಚ್ಚಾಗುತ್ತಿರುವ ಪರಿಸರ ಮಾಲಿನ್ಯ ತಡೆಗಟ್ಟಲು ಈ ನಿರ್ಧಾರ ಕೈಗೊಂಡಿದ್ದು, ಇದರಿಂದ ಮುಂದಿನ ಯುವಜನಾಂಗದ ಆರೋಗ್ಯಕರ ಉಸಿರಾಟಕ್ಕೆ ಧಕ್ಕೆ ಉಂಟಾಗುವುದಿಲ್ಲ. ಟ್ರಾಫಿಕ್ ಮುಕ್ತ ದಿನಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ಕೋರಿದರು.


ಸಂಬಂಧಿತ ಟ್ಯಾಗ್ಗಳು

H.M.revanna BMTC ಟ್ರಾಫಿಕ್ ಟ್ರ್ಯಾಕ್ಟರ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ