ಸರಣಿ ಕಳ್ಳತನ ಬೆಚ್ಚಿಬಿದ್ದ ಜನತೆ

series of theft in kodagu

08-12-2017

ಕೊಡಗು: ಒಂದೇ ರಾತ್ರಿಯಲ್ಲಿ ಸುಮಾರು 8 ಕ್ಕೂ ಅಧಿಕ ಅಂಗಡಿಗಳಲ್ಲಿ ಸರಣಿ ಕಳ್ಳತನ ನಡೆದಿರುವ ಘಟನೆಯು ಕೊಡಗಿನಲ್ಲಿ ಬೆಳಕಿಗೆ ಬಂದಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದ್ದು, ಸೋಮವಾರಪೇಟೆ ಪಟ್ಟಣದ ಬಸ್ ನಿಲ್ದಾಣದ ಬಳಿ ಇರುವ 4 ಅಂಗಡಿಗಳಲ್ಲಿ ಮತ್ತು  ಸೋಮವಾರಪೇಟೆ ಸಮೀಪದ ಶನಿವಾರಸಂತೆಯಲ್ಲಿ 3 ಅಂಗಡಿಗಳು, ಬೀಟಿಕಟ್ಟೆ ಗ್ರಾಮದ 2 ಅಂಗಡಿಗಳಲ್ಲಿ ಕಳ್ಳತನ ಮಾಡಿದ್ದಾರೆ.

ದುಷ್ಕರ್ಮಿಗಳು ಅಂಗಡಿಗಳ ಶೆಟರ್ ಮುರಿದು ಕಳ್ಳತನ ನಡೆಸಿದ್ದಾರೆ. ಮೆಡಿಕಲ್ ಶಾಪ್, ಸ್ಟೋರ್, ಶೂ ಅಂಗಡಿ, ಸೇರಿದಂತೆ ವಿವಿಧ ಅಂಗಡಿಗಳಿಗೆ ನುಗ್ಗಿ ಕೈಗೆ ಸಿಕ್ಕಿದ್ದನ್ನು ದೋಚಿ ಪರಾರಿಯಾಗಿದ್ದಾರೆ. ಇನ್ನು ಸರಣಿ ಕಳ್ಳತನ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಸೋಮವಾರಪೇಟೆ ಹಾಗೂ ಶನಿವಾರಸಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ಖದೀಮರ ಬಂಧನಕ್ಕೆ ಬಲೆ ಬೀಸಿದ್ದಾರೆ. ಕಳ್ಳರು ಕಾರಿನಲ್ಲಿ ಬಂದು ಈ ಕೃತ್ಯ ಎಸಗಿದ್ದು, ಜಿಲ್ಲೆಯ ಹೊರಭಾಗದಿಂದ ಕಳ್ಳರ ಬಂದಿರಬಹುದೆಂಬ ಶಂಕೆ ವ್ಯಕ್ತಪಡಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ