ಅನಿಲ್ ಲಾಡ್ ವಿರುದ್ಧ ಎಫ್ಐಆರ್

Fir against anil lad

08-12-2017

ಬಳ್ಳಾರಿ: ಅಕ್ರಮ ಅದಿರು ಸಾಗಾಟ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಬಳ್ಳಾರಿ ನಗರ ಶಾಸಕ ಅನಿಲ್ ಲಾಡ್ ವಿರುದ್ಧ ಎಸ್ಐಟಿ ಎಫ್ಐಆರ್ ದಾಖಲಿಸಿದೆ. 2010 ರಿಂದ 2012 ರವರೆಗೆ, ಪರವಾನಿಗೆ ಇಲ್ಲದೇ 82 ಸಾವಿರ ಮೆಟ್ರಿಕ್ ಟನ್ ಅದಿರು ಅಕ್ರಮವಾಗಿ ಸಾಗಾಟ ಆರೋಪ ಎದುರಿಸುತ್ತಿದ್ದು, ಸುಮಾರು 12.30 ಕೋಟಿ ಮೌಲ್ಯದ ಅದಿರು ಪರವಾನಿಗೆ ಇಲ್ಲದೇ ಸಾಗಾಟ ಮಾಡಲಾಗಿದೆ ಎನ್ನಲಾಗಿದೆ. ಅನಿಲ್ ಲಾಡ್ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿರುವ ಕೆನರಾ ಮಿನಿರಲ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ. ಇನ್ನು ಅಕ್ರಮ ಅದಿರು ಸಾಗಾಟ ಕುರಿತಂತೆ, ಎಸ್ಐಟಿ ಮುಖ್ಯಸ್ಥ ಚರಣ್ ರೆಡ್ಡಿ ನೇತೃತ್ವದಲ್ಲಿ ತನಿಖೆ ಚುರುಕುಗೊಂಡಿದ್ದು, ಅನಿಲ್ ಲಾಡ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Anil lad  illegal mining ಎಫ್ಐಆರ್ ಅಕ್ರಮ ಅದಿರು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ