‘ಬೀದರ್ ನಲ್ಲಿ ಪರಿವರ್ತನಾ ಯಾತ್ರೆ ವಿಫಲ’08-12-2017 531

ಬೆಂಗಳೂರು: ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು, ಬೀದರ್ ನಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆ ಸಂಪೂರ್ಣ ವಿಫಲವಾಗಿದೆ, ಅಲ್ಲಿ ಅರ್ಧದಷ್ಟು ಕುರ್ಚಿಗಳು ಖಾಲಿ ಇದ್ದವು ಎಂದು, ಪೌರಾಡಳಿತ ಸಚಿವ ಈಶ್ವರ್ ಖಂಡ್ರೆ ಹೇಳಿದ್ದರೆ. ವಿಕಾಸ ಸೌಧದಲ್ಲಿಂದು ಮಾತನಾಡಿದ ಅವರು, ಬೀದರ್ ನ ಆರಕ್ಕೆ ಆರು ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇನ್ನು ಪ್ರತ್ಯೇಕ ವೀರಶೈವ ಲಿಂಗಾಯತ ಧರ್ಮ ವಿಚಾರವಾಗಿ ಪ್ರತಿಕ್ರಿಯಿಸಿ, ಸಾಹಿತ್ಯದಲ್ಲಿ ವೀರಶೈವ ರೂಢಿಯಲ್ಲಿ ಲಿಂಗಾಯತ ಆಗಿದೆ, ನಾವು ಬಹಳಷ್ಟು ವರ್ಷಗಳ ಹಿಂದೆ ಪ್ರತ್ಯೇಕ ಧರ್ಮಕ್ಕೆ ಬೇಡಿಕೆ ಇಟ್ಟಿದ್ದೆವು, ಒಗ್ಗೂಡುವ ಸಮಯ ಬರುತ್ತದೆ, ನಾವೆಲ್ಲ ಒಂದೇ ಇದ್ದೇವೆ ಎಂದು ಹೇಳಿದರು.

 ಸಂಬಂಧಿತ ಟ್ಯಾಗ್ಗಳು

Eshwara Bhimanna Veerashaiva ವೀರಶೈವ ಪೌರಾಡಳಿತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ