'ಕಾಂಗ್ರೆಸ್ ಕಳೆದುಕೊಳ್ಳಲಿದೆ ಹಿಮಾಚಲ್’08-12-2017 576

ಶಿವಮೊಗ್ಗ: ಮುಂಬರುವ ವಿಧಾನಸಭೆ ಚುನಾವಣೆಗೆ ತಯಾರಿ ಸಂಪೂರ್ಣವಾಗಿದೆ ಎಂದು, ಬಿಜೆಪಿ ಉಸ್ತುವಾರಿ ಮುರುಳಿಧರ್ ರಾವ್ ಹೇಳಿದ್ದಾರೆ. ಶಿವಮೊಗ್ಗದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪರಿವರ್ತನಾ ರ‍್ಯಾಲಿಗೆ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜ್ಯ ಸರ್ಕಾರದ ಭ್ರಷ್ಟಾಚಾರ ಮತ್ತು ಉ‌ಗ್ರವಾದದ ವಿಚಾರಗಳನ್ನಿಟ್ಟುಕೊಂಡು, ಮುಂಬರುವ ಚುನಾವಣೆಗೆ ಬಿಜೆಪಿ ಹೋಗುತ್ತದೆ ಎಂದರು.

ಕಾಂಗ್ರೆಸ್ ಸರ್ಕಾರದ ಕಾರಣದಿಂದ ಬಿಜೆಪಿ ಕಾರ್ಯಕರ್ತರ ಕೊಲೆ ನಡೆಯುತ್ತಿದೆ, ಬಿಜೆಪಿಯನ್ನು ಕಾಂಗ್ರೆಸ್ ನಂಬರ್ ಒನ್ ಶತ್ರು ಎಂದು ಭಾವಿಸಿದೆ ಇದು ತಪ್ಪು, ಸಿದ್ದರಾಮಯ್ಯನವರು ಭ್ರಷ್ಟಾಚಾರ ಮಂತ್ರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿದರು.

ಸರ್ಕಾರ, ರಾಜ್ಯದಲ್ಲಿ ರೈತರ ಆತ್ಮಹತ್ಯೆ ತಡೆಯಲು ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಡಿಸೆಂಬರ್ 18 ರಂದು ಕಾಂಗ್ರೆಸ್ ಹಿಮಾಚಲ್ ಪ್ರದೇಶವನ್ನು ಕಳೆದುಕೊಳ್ಳಲಿದೆ, ಡಿಸೆಂಬರ್ 18ರ ನಂತರ ರಾಷ್ಟ್ರಿಯ ಬಿಜೆಪಿ ಗಮನ ರಾಜ್ಯದ ಮೇಲೆ ಇರುತ್ತದೆ ಎಂದು ತಿಳಿಸಿದರು.

ಕಾಂಗ್ರೆಸ್ ನವರ ಕೂಳಕು ಮಾತುಗಳಿಗೆ ಜನ ಚುನಾವನಣೆಯಲ್ಲಿ ಉತ್ತರ ನೀಡಲಿದ್ದಾರೆ, ಪ್ರಧಾನ ಮಂತ್ರಿ ಮೋದಿ ಪರಿವರ್ತನಾ ಯಾತ್ರೆಯ ಅಂತಿಮ ದಿನ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಯಾವುದೇ ಅಸಂವಿಧಾನೀಯ ಪದ ಬಳಕೆ ಬಿಜೆಪಿ ಬೆಂಬಲಿಸುವುದಿಲ್ಲ, ಸಿಎಂ ಸಿದ್ದರಾಮಯ್ಯ ಸಾಕಷ್ಟು ಸಲ ಬಿಎಸ್ ವೈ ವಿರುದ್ಧ ಅಸವಿಂಧಾನಿಕ ಪದ ಬಳಕೆ ಮಾಡಿದ್ದಾರೆ, ಇದು ಸರಿಯಲ್ಲ ಎಂದರು. ಇನ್ನು ಇದೇ ವೇಳೆ ಗುಜರಾತ್ ನಲ್ಲಿ ಬಿಜೆಪಿ ಹಿಂದಿಗಿಂತ ಹೆಚ್ಚಿನ ಸ್ಥಾನ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ