ವೇಶ್ಯಾವಾಟಿಕೆ ದಂಧೆ: ಮೂವರ ರಕ್ಷಣೆ

Prostitution: rescued three girls

08-12-2017

ಬೆಂಗಳೂರು: ಬೆಂಗಳೂರಿನ ಬೇಗೂರಿನ ವಿಶ್ವಪ್ರಿಯ ನಗರದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮಹಿಳೆಯೊಬ್ಬರನ್ನು ಬಂಧಿಸಿ ಮೂವರು ಯುವತಿಯರನ್ನು ಸಿಸಿಬಿ ಪೊಲೀಸರು ರಕ್ಷಿಸಿದ್ದಾರೆ. ಬೇಗೂರಿನ ವಿಶ್ವಪ್ರಿಯ ನಗರದ ಸಿದ್ದಮ್ಮ (34) ಬಂಧಿತ ಆರೋಪಿಯಾಗಿದ್ದಾಳೆ. ಈಕೆ ಬೇರೆಡೆಯಿಂದ ಯುವತಿಯರನ್ನು ಹೆಚ್ಚಿನ ಹಣದಾಸೆ ತೋರಿಸಿ ಕರೆತಂದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಳು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ದಂಧೆ ನಡೆಸುತ್ತಿದ್ದ ಮಹಿಳೆಯನ್ನು ಬಂಧಿಸಿ ಮೂವರು ಯುವತಿಯನ್ನು ರಕ್ಷಿಸಿದ್ದಾರೆ. ಸಿದ್ದಮ್ಮ ವಿರುದ್ಧ ಬೇಗೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ