ಮೀನುಗಾರಿಕೆ ಇಲಾಖೆಗೆ 60 ವರ್ಷ

60 years for Fishing Department

08-12-2017

ಬೆಂಗಳೂರು: ಒಳನಾಡು ಮೀನುಗಾರಿಕೆಗಾಗಿ ಹೊಸ ನೀತಿ ರೂಪಿಸಲಾಗಿದ್ದು, ಶೀಘ್ರದಲ್ಲೇ ಸಚಿವ ಸಂಪುಟದ ಅನುಮೋದನೆ ಪಡೆದು ನೀತಿಯನ್ನು ಜಾರಿಗೆ ತರಲಾಗುವುದು ಎಂದು ಮೀನುಗಾರಿಕೆ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.

ಮೀನುಗಾರಿಕೆ ಇಲಾಖೆಗೆ 60 ವರ್ಷ ತುಂಬಿದ ಸಂದರ್ಭದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ 3 ದಿನಗಳ ಮತ್ಸ್ಯ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಒಳನಾಡಿನಲ್ಲಿ ಮೀನುಗಾರಿಕೆ ಸಾಕಷ್ಟು ಅವಕಾಶಗಳಿದ್ದು, ಇದನ್ನು ಸದುಪಯೋಗ ಪಡಿಸಿಕೊಂಡು ಅಭಿವೃದ್ಧಿ ಪಡಿಸುವ ದೃಷ್ಟಿಯಿಂದ ಹೊಸ ನೀತಿ ಜಾರಿಗೆ ತರಲಾಗುತ್ತಿದೆ ಎಂದರು. ಉತ್ತರ ಒಳನಾಡಿನ ನೀರು ಆಶ್ರಯದ ಕೃಷಿ ಭೂಮಿಯಲ್ಲಿ ಮೀನುಗಾರಿಕೆಗೆ ಸಾಕಷ್ಟು ಅವಕಾಶಗಳಿದ್ದು, ಒಂದು ಎಕರೆ ಪ್ರದೇಶದಲ್ಲಿ ವರ್ಷಕ್ಕೆ ಒಂದೂವರೆ ಲಕ್ಷರೂಪಾಯಿ ಗಳಿಸಬಹುದಾಗಿದೆ. ಇದಕ್ಕಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸಬ್ಸಿಡಿ ಒದಗಿಸಲಿವೆ. ರೈತರು ಇದನ್ನು ಸದುಪಯೋಗ ಪಡಿಸಿಕೊಂಡು ಮೀನುಗಾರಿಕೆಗೆ ಮುಂದಾಗಬೇಕು ಎಂದು ಕರೆ ನೀಡಿದರು.

ಬಾಗಲಕೋಟೆಯಲ್ಲಿ ಅಂಬಿಗ ಚೌಡಯ್ಯ ಮೀನುಗಾರಿಕಾ ಕೇಂದ್ರ ಆರಂಭವಾಗಲಿದೆ. ಇದಕ್ಕಾಗಿ 2 ಕೋಟಿ ರೂಪಾಯಿ ಮಂಜೂರು ಮಾಡಲಾಗಿದ್ದು, ಕೆಲಸಗಳು ಅಂತಿಮ ಹಂತದಲ್ಲಿವೆ ಎಂದು ಅವರು ವಿವರಿಸಿದರು. ಬೆಂಗಳೂರು ನಗರ ಮೀನು ಮಾರುಕಟ್ಟೆಗೆ ಉತ್ತಮ ಕೇಂದ್ರವಾಗಿದ್ದು, ಮಾರಾಟ ಹೆಚ್ಚಿಸುವ ನಿಟ್ಟಿನಲ್ಲಿ ಮತ್ಸ್ಯಮೇಳವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ ಎಂದು ಅವರು ತಿಳಿಸಿದರು. ವೇಳೆ ಮೀನುಗಾರಿಕೆ ಕುರಿತ ಕಿರುಹೊತ್ತಿಗೆಯನ್ನು ಸಚಿವರು ಬಿಡುಗಡೆ ಮಾಡಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ