ನರಗುಂದ ಪಟ್ಟಣ ಬಂದ್ !

Narangunda Town Band!

09-12-2017

ಗದಗ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಮಹದಾಯಿ, ಕಳಸಾ-ಬಂಡೂರಿ ಹೋರಾಟ ಸಮಿತಿಯಿಂದ ಗದಗ ಜಿಲ್ಲೆಯ ನರಗುಂದ ಪಟ್ಟಣ ಬಂದ್ ಗೆ ಕರೆ ನೀಡಿದ್ದು, ನರಗುಂದ ಪಟ್ಟಣ ಸಂಪೂರ್ಣ ಬಂದ್ ಆಗಿದೆ. ಈ ವೇಳೆ ರೈತರು, ಟೈರ್ ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ವಿಜಯಪುರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ತಡೆದು ಭಾರೀ ಪ್ರತಿಭಟನೆ ನಡೆಸಿದ್ದಾರೆ. ರಸ್ತೆ ಮಧ್ಯೆ ಸಿಮೆಂಟ್ ಪೈಪು ಇಟ್ಟು ವಾಹನ ಸಂಚಾರವನ್ನು ತಡೆದಿದ್ದಾರೆ. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಳ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ಹೊರಹಾಕಿದ್ದಾರೆ. ಇನ್ನು ನರಗುಂದ ಪಟ್ಟಣದಲ್ಲಿ, ಸ್ವಯಂ ಪ್ರೇರಿತವಾಗಿ ಅಂಗಡಿ  ಬಂದ್ ಮಾಡಿದ್ದು, ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಈ ಕೂಡಲೆ ಕಳಸಾ-ಬಂಡೂರಿ ಯೋಜನೆ ಕುರಿತು ಸರ್ಕಾರ, ಅಧಿಕಾರಿಗಳು ಗಮನ ಹರಿಸುವಂತೆ ರೈತರು ಆಗ್ರಹಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ, ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Kalasa-banduri Nargund ಹೋರಾಟ ಕಳಸಾ-ಬಂಡೂರಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ