ಉತ್ತರ ಕನ್ನಡದಲ್ಲಿ ಪೊಲೀಸರ ಸರ್ಪಗಾವಲು

Police high protection in Uttar Kannada

09-12-2017

ಉತ್ತರ ಕನ್ನಡ: ಹೊನ್ನಾವರದ ‘ಪರೇಶ್ ಮೇಸ್ತ’ ಅನುಮಾನಾಸ್ಪದ ಸಾವು ಹಿನ್ನೆಲೆ, ಉತ್ತರ ಕನ್ನಡ ಜಿಲ್ಲೆಯಾದ್ಯಂತ ಪ್ರತಿಭಟನೆ ಕಾವು ಪಡೆದುಕೊಂಡಿದೆ. ಪರೇಶ್ ಸಾವಿಗೆ ಕೋಮು ಸ್ಪರ್ಷ ನೀಡಲಾಗುತ್ತಿದೆ ಎನ್ನಲಾಗಿದ್ದು, ಪರೇಶ್ ಸಾವು ಖಂಡಿಸಿ ಹಿಂದೂಪರ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದಾರೆ. ಹೊನ್ನಾವರ, ಕುಮಟಾ, ಅಂಕೋಲಾ, ಯಲ್ಲಾಪುರ ಹಾಗೂ ಜಿಲ್ಲೆಯ ಹಲವು ತಾಲ್ಲೂಕುಗಳಲ್ಲಿ ಬಂದ್ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಇನ್ನು ಪ್ರತಿಭಟನಾ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲೆಯಾದ್ಯಂತ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ