ತುಮಕೂರಿನ ಚಿಕ್ಕನಾಯಕನಹಳ್ಳಿ ಬಂದ್

Tumkur

11-12-2017

ತುಮಕೂರು: ಶಾಶ್ವತ ನೀರಾವರಿಗೆ ಆಗ್ರಹಿಸಿ ತುಮಕೂರಿನ ಚಿಕ್ಕನಾಯಕನಹಳ್ಳಿ ಬಂದ್ ಗೆ, ವಿವಿಧ ಸಂಘಟನೆಗಳು ಕರೆ ನೀಡಿದ್ದು, ತಾಲ್ಲೂಕಿನ ಒಟ್ಟು 26 ಕೆರೆಗಳಿಗೆ ನೀರು ಹಾಯಿಸುವಂತೆ ಒತ್ತಾಯಿಸಿದ್ದಾರೆ. 20 ಕ್ಕೂ ಹೆಚ್ಚು ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಮಂಜಾನೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಸಂಪೂರ್ಣ ಬಂದ್ ಆಚರಿಸಿಲಿದ್ದು, ಅಂಗಡಿ ಮುಂಗಟ್ಟುಗಳು, ಸಾರಿಗೆ ವ್ಯವಸ್ಥೆ ಎಲ್ಲವೂ ಬಂದ್ ಆಗಿದ್ದು, ಪ್ರತಿಭಟನಾಕಾರರು ಶಾಶ್ವತ ನೀರಾವರಿ ಒದಗಿಸುವಂತೆ ಒತ್ತಾಯಿಸಿದ್ದಾರೆ. ಇನ್ನು  ಬಂದ್ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಮಾಡಲಾಗಿದೆ.


ಸಂಬಂಧಿತ ಟ್ಯಾಗ್ಗಳು

permanent irrigation tumkur ಬಂದ್ ಬಂದೋಬಸ್ತ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ