'ವೀರಶೈವ ಮಹಾಸಭಾ ನಿರ್ಧಾರಕ್ಕೆ ಬಿಜೆಪಿ ಬದ್ಧ'

BJP committed to Veerashaiva Mahasabha decision

11-12-2017

ಬೆಂಗಳೂರು: ವೀರಶೈವ-ಲಿಂಗಾಯಿತರಿಗೆ ಪ್ರತ್ಯೇಕ ಧರ್ಮ ಕುರಿತ ವಿಚಾರದಲ್ಲಿ ಅಖಿಲ ಭಾರತ ವೀರಶೈವ ಮಹಾ ಸಭಾ ತೆಗೆದುಕೊಳ್ಳುವ ನಿರ್ಧಾರಕ್ಕೆ ಬಿಜೆಪಿ ಬದ್ಧವಾಗಲಿದೆ ಎಂದು, ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಜೇವರ್ಗಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೀರಶೈವ ಮತ್ತು ಲಿಂಗಾಯಿತರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಆದರೂ ಈ ವಿಚಾರದಲ್ಲಿ ವೀರಶೈವ ಮಹಾಸಭಾ ತೆಗೆದುಕೊಳ್ಳುವ ಅಂತಿಮ ನಿರ್ಧಾರಕ್ಕೆ ಪಕ್ಷ ಬದ್ಧವಾಗಿರಲಿದೆ ಎಂದರು.

ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಂಘಟಿಸಲು ಹಮ್ಮಿಕೊಂಡಿರುವ ‘ನವ ಕರ್ನಾಟಕ ಪರಿವರ್ತನಾ ಯಾತ್ರೆ’ ಯಶಸ್ವಿಯಾಗಿ ಸಾಗಿದೆ, ರಾಜ್ಯದ ಉದ್ದಗಲಕ್ಕೂ ಜನ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ ಎಂದು ಅವರು ಹೇಳಿದರು. ಆಡಳಿತಾರೂಢ ಕಾಂಗ್ರೆಸ್ ಪಕ್ಷ ಎಲ್ಲ ರಂಗಗಳಲ್ಲಿ ವಿಫಲವಾಗಿದ್ದು ಜನತೆಯನ್ನು ಜಾತಿ ಧರ್ಮದ ಆಧಾರದಲ್ಲಿ ವಿಂಗಡಿಸಲು ಹೊರಟಿದೆ ಎಂದು ಆಪಾದಿಸಿದರು. ಕಳೆದ ಕೆಲವಾರು ವರ್ಷಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಕಾರ್ಯಗಳು ಕುಂಠಿತವಾಗಿದ್ದು, ಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಸರ್ಕಾರಕ್ಕೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.


ಸಂಬಂಧಿತ ಟ್ಯಾಗ್ಗಳು

B.s yeddyurappa lingayat ಚುನಾವಣೆ 'ನವ ಕರ್ನಾಟಕ'


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ