ಲಾರಿ ಸಮೇತ ಚಾಲಕ ಸಜೀವ ದಹನ

Lorry driver burned alive with Lorry

12-12-2017

ಬೆಂಗಳೂರು: ಲಾರಿಗೆ ಬೆಂಕಿ ತಗುಲಿ ಲಾರಿ ಸಮೇತ ಚಾಲಕನೂ ಸಜೀವ ದಹನವಾಗಿರುವ ದಾರುಣ ಘಟನೆಯು, ಬೆಂಗಳೂರು ಗ್ರಾಮಾಂತರ ನೆಲಮಂಗಲದಲ್ಲಿ ನಡೆದಿದೆ. ರಾಜಸ್ಥಾನ ಮೂಲದ ಸುರೇಂದರ್(30) ಮೃತ ಲಾರಿ ಚಾಲಕ. ನೆಲಮಂಗಲ ತಾಲ್ಲೂಕಿನ ದೊಡ್ಡೇರಿ ಬಳಿಯಲ್ಲಿ  ತಡರಾತ್ರಿ ಪಾರ್ಕಿಂಗ್ ಲಾಟ್ ನಲ್ಲಿ ಲಾರಿ ನಿಲ್ಲಿಸಿ ಚಾಲಕ ಮಲಗಿದ್ದಾನೆ. ಮಲಗುವ ಮುನ್ನ ಸೊಳ್ಳೆ ಬತ್ತಿ ಹಚ್ಚಿ ಮಲಗಿದ್ದರು. ಈ ವೇಳೆ ಈ ದುರಂತ ಸಂಭವಿಸಿದೆ. ಇನ್ನು ಘಟನಾ ಸ್ಥಳಕ್ಕೆ ನೆಲಮಂಗಲ ಗ್ರಾಮಾಂತರ ಪೊಲೀಸರು ಧಾವಿಸಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ