ಕೊಪ್ಪಳದ ಕೈ ನಾಯಕರ ಮುಸುಕಿನ ಗುದ್ದಾಟ

koppal congress leaders cold war

12-12-2017

ಕೊಪ್ಪಳ: ಕೊಪ್ಪಳ ಜಿಲ್ಲೆ ಯಲಬುರ್ಗಾದ ಕಾಂಗ್ರೆಸ್ ನ ಪ್ರಭಾವಿ ಮುಖಂಡರ ಉಚ್ಛಾಟನೆಗೆ, ಯಲಬುರ್ಗಾ ಬ್ಲಾಕ್, ಕಾಂಗ್ರೆಸ್ ಅಧ್ಯಕ್ಷರು ಕೆಪಿಸಿಸಿಗೆ ಪತ್ರ ಬರೆದಿದ್ದಾರೆ. ತಾಲ್ಲೂಕಿನ ಕಾಂಗ್ರೆಸ್ ಮುಖಂಡರಾದ, ತಾಲ್ಲೂಕು ಪಂಚಾಯತಿಯ ಮಾಜಿ ಅಧ್ಯಕ್ಷ ವೀರನಗೌಡ ಪಾಟೀಲ ಹಾಗು ಆನಂದಾಗೌಡ ಪಾಟೀಲರನ್ನು ಪಕ್ಷದಿಂದ ಉಚ್ಛಾಟಿಸುವಂತೆ, ಯಲಬುರ್ಗಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ ಅವರು, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರಿಗೆ ಪತ್ರ ಬರೆದಿದ್ದಾರೆ. ನಮ್ಮ ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ ಬಸವರಾಜ ಉಳ್ಳಾಗಡ್ಡಿ, ಅಹಿಂದ ಸಭೆಯಲ್ಲಿ ಪಕ್ಷ ಮತ್ತು ಸಚಿವರ ವಿರುದ್ಧ ಮಾತನಾಡಿ, ತಾಲ್ಲೂಕಿನ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಕುರಿತು ಇಬ್ಬರು ನಾಯಕರನ್ನು ಪಕ್ಷದಿಂದ ಉಚ್ಛಾಟಿಸುವಂತೆ ಪತ್ರ ಬರೆದಿದ್ದಾರೆ.


ಸಂಬಂಧಿತ ಟ್ಯಾಗ್ಗಳು

congress yelaburga ಕೆಪಿಸಿಸಿಗೆ ಕಾರ್ಯಕರ್ತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ