‘ಪೊಲೀಸರಿಂದ ಮಾನವಹಕ್ಕು ಉಲ್ಲಂಘನೆ’-ಶೋಭಾ12-12-2017

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದ ಪರೇಶ್ ಮೇಸ್ತ ಹತ್ಯೆ ಪ್ರಕರಣದಲ್ಲಿ ಪೊಲೀಸರಿಂದ ಸಂಪೂರ್ಣ ಮಾನವಹಕ್ಕು ಉಲ್ಲಂಘನೆಯಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿದ್ದಾರೆ. ಈ ಕುರಿತಂತೆ ಪರೇಶ್ ಮೇಸ್ತ ಹತ್ಯೆ ಖಂಡಿಸಿ, ವಿಧಾನ ಸೌಧದಿಂದ ರಾಜಭವನ್ ವರೆಗೆ ಬಿಜೆಪಿ ಶಾಸಕರು, ಸಂಸದರು ಮತ್ತು ಬಿಬಿಎಂಪಿ ಸದಸ್ಯರ ತಂಡ, ಪಾದಯಾತ್ರೆ ತೆರಳಿ ರಾಜ್ಯ ಕಾಂಗ್ರೆಸ್ ವಿರುದ್ಧ ಪ್ರತಿಭಟಿಸಿದೆ. ಪಾದಯಾತ್ರೆಯಲ್ಲಿ ಈಶ್ವರಪ್ಪ, ಆರ್.ಅಶೋಕ್, ಶೋಭಾ ಕರಂದ್ಲಾಜೆ, ಪಿ.ಸಿ.ಮೋಹನ್ ಭಾಗಿಯಾಗಿದ್ದರು. ಪ್ರತಿಭಟನಾಕಾರರು ತಮ್ಮ ಕೈಯಲ್ಲಿ ಸರ್ಕಾರದ ವಿರುದ್ಧ ನಾಮ ಫಲಕಗಳನ್ನು ಹಿಡಿದುಕೊಂಡು, ಘೋಷಣೆಗಳನ್ನು ಕೂಗಿ ಪಾದಯಾತ್ರೆ ನಡೆಸಿದ್ದಾರೆ.

ಈ ವೇಳೆ ಮಾತನಾಡಿ ಶೋಭಾ ಕರಂದ್ಲಾಜೆ, ಕರಾವಳಿ ಭಾಗದಲ್ಲಿ ಐಎಸ್ಐಎಸ್ ಗೆ ನೇಮಕಾತಿ ನಡೆಯುತ್ತಿದೆ ಎನ್ನುವ ಮಾಹಿತಿಯೂ ಇದೆ, ಮೇಸ್ತ ಹತ್ಯೆ ಆಕಸ್ಮಿಕ ಸಾವು ಎಂದು ಹೇಳಲಾಗ್ತಿದೆ. ವಿಧಿವಿಜ್ಞಾನ ಪ್ರಯೋಗಾಲಯದ ವರದಿಯನ್ನೂ ತಿರುಚುವ ಸಾಧ್ಯತೆಗಳಿವೆ ಎಂದು ಆರೋಪಿಸಿದ್ದಾರೆ. ಇದಕ್ಕೆ ಧ್ವನಿಗೂಡಿಸಿ ಕೆ.ಎಸ್ ಈಶ್ವರಪ್ಪ, ಈ ಪ್ರಕರಣವನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮುಚ್ಚಿಹಾಕಲು ಹೊರಟಿದ್ದಾರೆ ಎಂದು ಆರೋಪಿಸಿದರು. ಸಿಎಂ ರಾಷ್ಟ್ರ ಭಕ್ತರ ಹೆಣಗಳ ಮೇಲೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.


ಸಂಬಂಧಿತ ಟ್ಯಾಗ್ಗಳು

shobha karandlaje K. S. Eshwarappa ರಾಜಭವನ್ ಪಾದಯಾತ್ರೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ