‘ರಾಜ್ಯ ಸರ್ಕಾರದಿಂದ ನ್ಯಾಯ ಸಿಗುವ ಭರವಸೆಯಿಲ್ಲ’12-12-2017

ಬೆಳಗಾವಿ: ಸಿದ್ದರಾಮಯ್ಯನದ್ದು ರಾಕ್ಷಸ ಮುಖವಿದೆ, ಕಾಂಗ್ರೆಸ್ ನವರು ಮೊದಲು ತಮ್ಮ ಮುಖ ಕನ್ನಡಿಯಲ್ಲಿ ನೋಡ್ಕೊಬೇಕು ಎಂದು, ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಹೇಳಿದ್ದಾರೆ. ಬೆಳಗಾವಿಯಲ್ಲಿಂದು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ನವರ ಮುಖ ರಾಕ್ಷಸ ಮುಖವೋ ಮನುಷ್ಯ ಮುಖವೊ ಗೊತ್ತಾಗುತ್ತೆ, ಪರೇಶ್ ಮೇಸ್ತನನ್ನು ಚಿತ್ರ ಹಿಂಸೆಕೊಟ್ಟು ಕೊಂದಿದ್ದಾರೆ. ಉತ್ತರ ಕರ್ನಾಟಕ ಜನ ಶಾಂತಿಪ್ರಿಯರು‌. ಪರೇಶ್ ಸಾವು ಮಾನವೀಯತೆಯ ಕಗ್ಗೊಲೆ, ವ್ಯವಸ್ಥಿತವಾಗಿ ಕೇಸು ಮುಚ್ಚಿ ಹಾಕಲಾಗುತ್ತಿದೆ, ನ್ಯಾಯಯುತ ತನಿಖೆ ಮಾಡುವ ಮನಸ್ಸು ಕಾಂಗ್ರೆಸ್ಸಿಗಿಲ್ಲ ಎಂದು ಆರೋಪಿಸಿದ್ದಾರೆ.

ಅಲ್ಪಸಂಖ್ಯಾತರ ಮತಗಳ ತುಷ್ಟೀಕರಣವಿದು, ಅಲ್ಲಿನ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ. ಸಿಪಿಐ, ಪಿಎಸ್ಐ ಪೊಲೀಸ್ ಅಧಿಕಾರಿಗಳು ಸಮಾಜಘಾತುಕ ಶಕ್ತಿಗಳೊಂದಿಗೆ ಶಾಮೀಲಾಗಿದ್ದಾರೆ, ರಾಜ್ಯ ಸರ್ಕಾರದಿಂದ ನಮಗೆ ನ್ಯಾಯ ಸಿಗುವ ಭರವಸೆಯಿಲ್ಲ ಎಂದರು. ರಾಜ್ಯದಲ್ಲಿ ಪರೇಶ್ ಮೇಸ್ತ ಸೇರಿ 20 ಜನರ ಕಗ್ಗೊಲೆ ಆಗಿದೆ. ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ತನಿಖೆ ನಡೆಸಲು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಆಗ್ರಹಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ