ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಸಿಡಿಲು ಬಡಿದು ಮೂವರು ಸಾವು

Kannada News

12-04-2017

ಮಂಗಳೂರು : ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಸಿಡಿಲು ಬಡಿದು ಮೂವರು ಸಾವು. ಇಬ್ಬರು ಮಹಿಳೆಯರು ಒಂದು ಮಗು ಸಾವು. ಇನ್ನೊಂದು ಮಗುವಿನ ಸ್ಥಿತಿ ಗಂಭೀರವಾಗಿದ್ದು ಸ್ಥಳೀಯ ಆಸ್ಪತ್ರೆ ಗೆ ದಾಖಲಿಸಲಾಗಿದೆ. ಸಾವಿಗೀಡಾದವರೆಲ್ಲಾ ಚಿತ್ರದುರ್ಗ ಮೂಲದ ಹಿರಿಯೂರು ತಾಲೂಕಿನ ನಿವಾಸಿಗಳಾಗಿದ್ದು ಬಂಟ್ವಾಳದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಕೆಲಸ ಮುಗಿಸಿ ನದಿಗೆ ಬಟ್ಟೆ ಒಗೆಯಲು ಇಳಿದಾಗ ಈ ಘಟನೆ ಸಂಭವಿಸಿದೆ. ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

Links :ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ