ಇನ್ಮುಂದೆ ಪ್ರತಿ ಮಂಗಳವಾರ ‘ಜನ ಸ್ಪಂದನ’

Every Tuesday is

12-12-2017

ಬೆಂಗಳೂರು: ಜನ ಸಾಮಾನ್ಯರ ಸಮಸ್ಯೆಗಳಿಗೆ ಮತ್ತಷ್ಟು ಪರಿಣಾಮಕಾರಿಯಾಗಿ ಸ್ಪಂದಿಸುವ ಉದ್ದೇಶದಿಂದ ಇನ್ನು ಮುಂದೆ ಪ್ರತಿಯೊಂದು ಇಲಾಖೆಯಲ್ಲೂ ಮಂಗಳವಾರ ಮಧ್ಯಾಹ್ನದ ನಂತರದ ಸಮಯವನ್ನು ಸಾರ್ವಜನಿಕರ ಕುಂದುಕೊರತೆಯ “ಜನ ಸ್ಪಂದನ” ಕಾರ್ಯಕ್ರಮಕ್ಕೆ ಮೀಸಲಿಡಲು ತೀರ್ಮಾನಿಸಲಾಗಿದೆ. ರಾಜ್ಯದ ಮುಖ್ಯಕಾರ್ಯದರ್ಶಿ ಕೆ.ರತ್ನಪ್ರಭ ಅಧ್ಯಕ್ಷತೆಯಲ್ಲಿ ನಡೆದ ವಿವಿಧ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಪ್ರತಿದಿನ ಮಧ್ಯಾಹ್ನದ ನಂತರ ಸಾರ್ವಜನಿಕರ ಭೇಟಿಗೆ ಅವಕಾಶ ಇದೆಯಾದರೂ, ಮಂಗಳವಾರದಂದು ವಿಶೇಷವಾಗಿ ಅರ್ಧ ದಿನ ಈ ಉದ್ದೇಶಕ್ಕೆ ಮೀಸಲಿಡಲು ನಿರ್ಧರಿಸಲಾಗಿದೆ. ಸಭೆಯ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜನ ಸಾಮಾನ್ಯರಿಗೆ ಮತ್ತಷ್ಟು ಸ್ಪಂದನೆಯ ಆಡಳಿತ ನೀಡುವ ಉದ್ದೇಶದಿಂದ ಈ ನಿರ್ದೇಶನ ನೀಡಲಾಗಿದೆ. ಅಧಿಕಾರಗಳು ಜನ ಸಾಮಾನ್ಯರ ಅಹವಾಲುಗಳನ್ನು ಆಲಿಸುವುದಿಲ್ಲ ಎನ್ನುವ ಅಪವಾದಗಳನ್ನು ದೂರ ಮಾಡುವ ಉದ್ದೇಶದಿಂದ ಈ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದರು.

ಜನರ ಸಮಸ್ಯೆ ಏನೆಂದು ತಿಳಿದರೆ ಅದಕ್ಕೆ ಪರಿಹಾರ ಸೂಚಿಸಬಹುದು. ಸಮಸ್ಯೆಗಳ ಅರಿವಾಗದಿದ್ದರೆ ಪರಿಹಾರ ಸೂಚಿಸುವುದು ಕಷ್ಟ. ಹೀಗಾಗಿ ಜನರ ಸಮಸ್ಯೆಗಳನ್ನು ಆಲಿಸಲು ಆದ್ಯತೆ ನೀಡಿದೆ ಎಂದು ಹೇಳಿದರು. ಇಲಾಖಾ ಪ್ರಧಾನಕಾರ್ಯದರ್ಶಿಗಳು ಈ ಸಂಬಂಧ ಶೀಘ್ರದಲ್ಲೇ ಸುತ್ತೋಲೆ ಹೊರಡಿಸಿ ನಿರ್ದೇಶನ ನೀಡಬೇಕು. ಇಂತಹ ಕ್ರಮಗಳಿಂದ ಜನ ಸಾಮಾನ್ಯರಲ್ಲಿ ಆಡಳಿತ ವ್ಯವಸ್ಥೆಯ ಬಗ್ಗೆ ಹೆಚ್ಚಿನ ಗೌರವ ಉಂಟು ಮಾಡಲು ಸಾಧ್ಯವಾಗಲಿದೆ ಎಂದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ