ಶಾಲೆಯಲ್ಲಿ ತಪ್ಪಿದ ಭಾರೀ ಅನಾಹುತ

cooker Blast in government school

12-12-2017

ಚಿತ್ರದುರ್ಗ: ಸರಕಾರಿ ಶಾಲೆಯ ಬಿಸಿಯೂಟದ ಕೊಠಡಿಯಲ್ಲಿ ಕುಕ್ಕರ್ ಸಿಡಿದಿದ್ದು, ಅಡುಗೆ ಸಿಬ್ಬಂದಿಗಳು ಗಾಯಗಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಯು ಚಿತ್ರದುರ್ಗ ತಾಲ್ಲೂಕಿನ ಹಳೇ ರಂಗಾಪುರ ಗ್ರಾಮದ ಸರಕಾರಿ ಶಾಲೆಯಲ್ಲಿ ನಡೆದಿದೆ. ಕುಕ್ಕರ್ ಸಿಡಿತದಿಂದ ಶಿಥಿಲಗೊಂಡ ಮೇಲ್ಚಾವಣಿಯ ಸಿಮೆಂಟ್ ಶೀಟ್ಗಳು ಕೆಳಕ್ಕೆ ಬಿದ್ದಿವೆ. ಇನ್ನು ಘಟನೆಯಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಶಾಲೆಯಲ್ಲಿ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಹಾಳಾಗಿದ್ದ  ಕುಕ್ಕರ್ ನ ರಬ್ಬರ್ನಿಂದಾಗಿ, ಈ ದುರ್ಘಟನೆ ಸಂಭವಿಸಿರುವುದಾಗಿ ತಿಳಿದುಬಂದಿದೆ. ಹಲವು ಬಾರಿ ಮೇಲಾಧಿಕಾರಿಗಳಿಗೆ ಈ ಕುರಿತು, ಮನವಿ ಮಾಡಿದರೂ ಪ್ರಯೋಜನವಾಗದ ಹಿನ್ನೆಲೆ ಈ ಘಟನೆ ಸಂಭವಿಸಿದೆ. ಗಾಯಗೊಂಡಿರುವ ಇಬ್ಬರು ಮಹಿಳೆಯರನ್ನು ಸಿರಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಹಿಡಿಶಾಪ ಹಾಕಿದ್ದಾರೆ.


ಸಂಬಂಧಿತ ಟ್ಯಾಗ್ಗಳು

government school cooker blast ಬಿಸಿಯೂಟ ಅಧಿಕಾರಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ