ತುಮಕೂರಿನಲ್ಲಿ ಎಸಿಬಿ ದಾಳಿ

Koratagere: ACB raid on AEE home

13-12-2017

ತುಮಕೂರು: ತುಮಕೂರಿನಲ್ಲಿ ಬೆಳ್ಳಂ ಬೆಳಿಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತುಮಕೂರು ಎಸಿಬಿ ಡಿವೈಎಸ್ಪಿ ಜಿ.ಎನ್ ಮೋಹನ್ ನೇತೃತ್ವದಲ್ಲಿ, ಪಿಡಬ್ಲ್ಯೂ ಎಇಇ ಜಗದೀಶ್ ಅವರ ಕೊರಟಗೆರೆಯ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ, ಎಇಇ ಆದ ಜಗದೀಶ್ ಸತತ ನಾಲ್ಕೂವರೆ ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದರು. ಅಕ್ರಮ ಆಸ್ತಿ ಆರೋಪ ಕೇಳಿ ಬಂದ ಹಿನ್ನೆಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೇ ಸರಸ್ವತಿಪುರಂ ನಲ್ಲಿರುವ ಮನೆ ಮೇಲೆಯೂ ದಾಳಿ ನಡೆಸಿ, ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

ACB AEE ಕೊರಟಗೆರೆ ದಾಖಲೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ