ರವಿ ಬೆಳಗೆರೆ ಆರೋಗ್ಯದಲ್ಲಿ ಏರುಪೇರು

Ravi Belagere health upset

13-12-2017 253

ಬೆಂಗಳೂರು: ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಪ್ರಕರಣದಲ್ಲಿ ಶಿಕ್ಷೆಗೆ ಅನುಭವಿಸುತ್ತಿರುವ ಹಿರಿಯ ಪತ್ರಕರ್ತ ರವಿ ಬೆಳಗೆರೆ ಅವರು ಜೈಲಿನಲ್ಲಿ 2ನೇ ರಾತ್ರಿ ಕಳೆದಿದ್ದು, ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ಜೈಲಾಧಿಕಾರಿಗಳು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ವೈದ್ಯರು ರವಿ ಬೆಳಗೆರೆಯವರನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳುವಷ್ಟು ಗಂಭೀರ ಸ್ಥಿತಿಯಿಲ್ಲ. ಜೈಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು ಎಂದು ಹೇಳಿ ರಕ್ತ ಪಡೆದುಕೊಂಡು ಪರೀಕ್ಷೆ ವರದಿ ಬಂದ ಬಳಿಕ ಚಿಕಿತ್ಸೆಗೆ ದಾಖಲಿಸಿಕೊಳ್ಳುವ ಬಗ್ಗೆ ನೋಡೋಣ ಎಂದು ಹೇಳಿ ವಾಪಸ್ ಕಳುಹಿಸಿದ್ದರು.

ರವಿ ಬೆಳಗೆರೆ ಆರೋಗ್ಯದಲ್ಲಿ ಬದಲಾವಣೆ ಸಾಧ್ಯತೆ ಹಿನ್ನಲೆಯಲ್ಲಿ ಜೈಲಿನಲ್ಲಿಯೇ ವೈದ್ಯರನ್ನು ನಿಯೋಜಿಸಲಾಗಿದೆ. ರಾತ್ರಿ 11.30ರ ವೇಳೆಗೆ ಮನೆಯ ಊಟ ಸೇವಿಸಿದ ರವಿ ಬೆಳಗೆರೆ ನಿದ್ದೆಗೆ ಜಾರಿದ್ದರು. ಸದ್ಯ ಜೈಲಾಸ್ಪತ್ರೆಯ 8ನೇ ಕೊಠಡಿಯಲ್ಲಿರುವ ರವಿ ಬೆಳಗೆರೆಯವರನ್ನು ಇಂದು ಪುನಃ ಆಸ್ಪತ್ರೆಗೆ ಕರೆದೊಯ್ಯುವ ಸಾಧ್ಯತೆ ಇದೆ. ಜೈಲಿನ ಬಳಿ ತಂದೆ ಊಟ ತಂದು ಸರದಿ ಸಾಲಿನಲ್ಲಿ ನಿಂತಿದ್ದು ಪುತ್ರಿ ಚೇತನಾ ಬೆಳಗೆರೆ, ನಮ್ಮ ತಂದೆಯವರಿಗೆ ಮೊದಲೇ ಆರೋಗ್ಯ ಸರಿಯಿಲ್ಲ ಇದರ ಮಧ್ಯೆ ಅವರನ್ನು ಒಂದು ಕಡೆಯಿಂದ ಮತ್ತೊಂದು ಕಡೆಗೆ ಕರೆದೊಯ್ಯಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ