‘ನನ್ನ ತಂಟೆಗೆ ಬಂದರೆ ಸುಮ್ಮನೆ ಬಿಡಲ್ಲ’13-12-2017

ಕಲಬುರಗಿ: ನಾನು ರಾಜಕೀಯವಾಗಿ ಪ್ರಾಮಾಣಿಕತೆಯಿಂದ ಬೆಳೆದು ಬಂದ ವ್ಯಕ್ತಿ, ನನ್ನ ತಂಟೆಗೆ ಬಂದರೆ ಸುಮ್ಮನೆ ಇರುವುದಿಲ್ಲ ಎಂದು, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ. ಕಮೀಷನ್ ತೆಗೆದುಕೊಂಡು ಅಧಿಕಾರ ನಡೆಸುತ್ತಿದ್ದಾರೆ ಎಂಬ ಬಿಜೆಪಿ ಮುಖಂಡರ ಆರೋಪಕ್ಕೆ ಕಲಬುರಗಿಯಲ್ಲಿಂದು, ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆಯನ್ನು ತೆಗೆದವನೇ ನಾನು, ಬ್ಯಾಂಕಿಗೆ ವಂಚಿಸಿ ಸಿಬಿಐ ತನಿಖೆ ಎದುರಿಸುತ್ತಿರುವ ರಾಜಕುಮಾರ್ ಪಾಟೀಲ್ ನನಗೆ ನೀತಿ ಹೇಳುವ ಅವಶ್ಯಕತೆ ಇಲ್ಲ ಎಂದು ಹರಿಹಾಯ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ