ಪೊಲೀಸ್ ಅಧಿಕಾರಿಗಳೊಂದಿಗೆ ಸಭೆಗೆ ಸಿದ್ಧತೆ

Preparing for a meeting with police officers

14-12-2017

ಬೆಂಗಳೂರು: ಬರುವ ವಿಧಾನಸಭೆ ಚುನಾವಣೆ ಹಾಗೂ ಇತ್ತೀಚಿಗೆ ರಾಜ್ಯದ ಕರಾವಳಿ ಭಾಗಗಳು ಸೇರಿ ಇನ್ನಿತರ ಕಡೆಗಳಲ್ಲಿ ಉಂಟಾಗುತ್ತಿರುವ ಕೋಮುಗಲಭೆಗಳ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಕುರಿತು ಚರ್ಚೆ ನಡೆಸಲು ರಾಜ್ಯ ಎಲ್ಲಾ ವಲಯಗಳ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಲು ಗೃಹ ಸಚಿವ ರಾಮಲಿಂಗಾರೆಡ್ಡಿ  ನಿರ್ಧರಿಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಮುಂದಿನ ವಾರದ ಯಾವುದೇ ದಿನ ನಡೆಯುವ ಸಾಧ್ಯತೆಯಿದೆ. ಬಿಜೆಪಿ ತಂತ್ರಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿತಂತ್ರ ರೂಪಿಸಲಿದೆ. ಕೋಮುಗಲಭೆಗೆ ಬಿಜೆಪಿ ನೀಡುತ್ತಿರುವ ಕುಮ್ಮಕ್ಕನ್ನು ವಿಫಲಗೊಳಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮದ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆ ಇದೆ. ಮೈಸೂರು, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಇನ್ನೂ  ಅನೇಕ ಜಿಲ್ಲೆಗಳಲ್ಲಿ  ಬಿಜೆಪಿ ಗಲಭೆಗಳು ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ  ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವ ಕುರಿತಂತೆ ಡಿಜಿ-ಐಜಿಗಳ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ.

ಸಭೆ ಬಗ್ಗೆ ಐಜಿಗಳ ಜೊತೆ ದೂರವಾಣಿ ಮೂಲಕ ಗೃಹ ಸಚಿವರು ರಾಮಲಿಂಗಾ ರೆಡ್ಡಿ ಮಾತನಾಡಿದ್ದು, ಬರುವ ವಾರ ಡಿಜಿ-ಐಜಿಗಳ ಸಭೆ ನಡೆಯುವ ಸಾಧ್ಯತೆಯಿದೆ. ಸರ್ಕಾರ ಮತ್ತು ಇಲಾಖೆಗೆ ಕೆಟ್ಟ ಹೆಸರು ತರುವ ಕೆಲಸ ನಡೆಯುತ್ತಿದೆ. ಇದಕ್ಕೆಲ್ಲ ಆಸ್ಪದ ನೀಡಬೇಡಿ. ಗೊಂದಲ ಸೃಷ್ಟಿಯಾಗದಂತೆ ಕ್ರಮ ಕೈಗೊಳ್ಳಿ. ಯಾರೇ ತಪ್ಪು ಮಾಡಿದರೂ ಕ್ರಮ ಕೈಗೊಳ್ಳುವಂತೆ ಐಜಿಗಳಿಗೆ ಗೃಹಸಚಿವರು ಸೂಚನೆ ನೀಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Ramalinga reddy DG-IG meeting ಪ್ರತಿತಂತ್ರ ಕರಾವಳಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ