‘ಹೈಕಮಾಂಡ್ ಒಪ್ಪಿಗೆ ಮೇರೆಗೆ ಅಭ್ಯರ್ಥಿಗಳ ಪಟ್ಟಿ’14-12-2017

ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ ಅವರು ಪ್ರತಿಕ್ರಿಯಿಸಿ, ಬಿಜೆಪಿ, ಜೆಡಿಎಸ್ ಪಟ್ಟಿ ಬಿಡುಗಡೆಗೆ ಸಿದ್ಧವಾಗುತ್ತಿದೆ, ನಮ್ಮದು ನ್ಯಾಷನಲ್ ಪಕ್ಷ, ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಯಾರ ಕೇಳಬೇಕು ನಮಗೆ ಗೊತ್ತು, ಕ್ಷೇತ್ರಗಳಿಗೆ ನಿಗಾ ಇಡುವ ವ್ಯಕ್ತಿಗಳನ್ನು ಮುಂದಿನ 2 ದಿನಗಳಿಗೆ ಕಳುಹಿಸಲಾಗುತ್ತದೆ, ಅಲ್ಲಿನ ಎಲ್ಲಾ ಆಗು-ಹೋಗುಗಳು, ಅಭ್ಯರ್ಥಿ ಗೆಲುವಿನ ಲೆಕ್ಕಚಾರ, ಕ್ಷೇತ್ರದ ಬಲಾಬಲ ಗೊತ್ತಗುತ್ತದೆ, ಈ ವರದಿಯನ್ನು ಹೈಕಮಾಂಡ್ ಗೆ ಕಳುಹಿಸಿ ಮತ್ತೊಮ್ಮೆ ಅಭಿಪ್ರಾಯ ಪಡೆಯಲಾಗುತ್ತದೆ, ಆಗ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ರೆ ಮಾತ್ರ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಇನ್ನು ಇದೇ ವೇಳೆ ಗುಜರಾತ್ ಚುನಾವಣೆ ಕುರಿತು ಮಾತನಾಡಿ, ಗುಜರಾತ್ ನಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ.‌ ಆದರೆ ಮತ ಯಂತ್ರಗಳ ದುರುಪಯೋಗ ಸಾಧ್ಯತೆ ಹೆಚ್ಚಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಮತಯಂತ್ರಗಳ ದುರಪಯೋಗದ ಬಗ್ಗೆ ಪಕ್ಷದಿಂದ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ ಎಂದರು.


ಸಂಬಂಧಿತ ಟ್ಯಾಗ್ಗಳು

G.parameswar Election Commission ಮತಯಂತ್ರ ಕೆಪಿಸಿಸಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ