ಹೊನ್ನಾವರದಲ್ಲಿ ನಿಷೇಧಾಜ್ಞೆ

144 section in honnavar

14-12-2017

ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ, ಪರೇಶ್ ಸಾವು ಬೆನ್ನಲ್ಲೇ ಮತ್ತೊಂದು ಹಲ್ಲೆ ಪ್ರಕರಣ ಬೆಳಕಿಗೆ ಬಂದಿದೆ. ಶಾಲಾ ಬಾಲಕಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ. ಬಾಲಕಿಯ ಕೈಗೆ ಚಾಕುವಿನಿಂದ ಗಾಯಗೊಳಿಸಿ ಕ್ಷಣಮಾತ್ರದಲ್ಲಿ ಪರಾರಿಯಾಗಿದ್ದಾರೆ. ಹಲ್ಲೆ ಮಾಡಿದ ವ್ಯಕ್ತಿ ಯಾರೆಂದು ತಿಳಿದು ಬಂದಿಲ್ಲ,  ಕಾವ್ಯ ಶೇಖರ್ ಹಲ್ಲೆಗೊಳಗಾದ ವಿದ್ಯಾರ್ಥಿನಿ. ಘಟನೆಯಿಂದ ಹೊನ್ನಾವರದಲ್ಲಿ ಮತ್ತೆ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಇದರಿಂದ ಹೆದರಿದ ವ್ಯಾಪಾರಿಗಳು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ್ದಾರೆ. ಇನ್ನು ಹೊನ್ನಾವರ ತಾಲ್ಲೂಕಿನಾದ್ಯಂತ 24ಗಂಟೆ 144 ನಿಷೇಧಾಜ್ಞೆ ಹೊರಡಿಸಿ ಭಟ್ಕಳ ಉಪ ವಿಭಾಗಾಧಿಕಾರಿ ಆದೇಶಿದ್ದಾರೆ. ನಾಳೆ ಬೆಳಿಗ್ಗೆ 11ರವರೆಗೆ ಹೊನ್ನಾವರ ತಾಲೂಕಾದ್ಯಂತ 5ಕ್ಕಿಂತ ಹೆಚ್ಚು ಮಂದಿ ಗುಂಪಾಗಿರುವುದು ನಿಷೇಧಿತ. ಶಾಂತಿ ಕಾಪಾಡುವ ಉದ್ದೇಶದಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು ಸಾರ್ವಜನಿಕರು ಸಹಕರಿಸುವಂತೆ ಅವರು ಕೋರಿದ್ದಾರೆ. ನಿಷೇಧಾಜ್ಞೆ ಸಾರ್ವಜನಿಕ ಸಾರಿಗೆಗೆ ಅನ್ವಯಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Honnavr 144 section ದುಷ್ಕರ್ಮಿ ನಿಷೇಧಾಜ್ಞೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ