ಚೆಕ್ ಡ್ಯಾಮ್ ನಲ್ಲಿ ಶವ ಪತ್ತೆ

Dead body found in check dam

14-12-2017

ಗದಗ: ಚೆಕ್ ಡ್ಯಾಮ್ ನಲ್ಲಿ ವಿವಾಹಿತ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ದೀಪಾ (21) ಎಂದು, ಮೃತ ಮಹಿಳೆಯನ್ನು ಗುರುತಿಸಲಾಗಿದೆ. ಘಟನೆಯು ಗದಗ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮುಂಡರಗಿಯ ಕನಕರಾಯನ ಗುಡ್ಡದ ಹತ್ತಿರವಿರುವ ಚೆಕ್ ಡ್ಯಾಮ್ ನಲ್ಲಿ ದೀಪಾ ಅವರ ಶವ ಪತ್ತೆಯಾಗಿದೆ. ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಸ್ಥಳೀಯರ ಸಹಕಾರದಿಂದ ಅಗ್ನಿಶಾಮಕದಳ ಸಿಬ್ಬಂದಿ ಮಹಿಳೆಯ ಶವವನ್ನು ಹೊರತೆಗೆದಿದ್ದಾರೆ. ಮೃತ ಮಹಿಳೆ ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಕಡ್ಲಿಪೇಠ ಓಣಿ ನಿವಾಸಿ ಎನ್ನಲಾಗಿದ್ದು, ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

check dam women suicide ಮುಂಡರಗಿ ಕೌಟುಂಬಿಕ ಕಲಹ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ