ನಗರ ಪೊಲೀಸ್ ಆಯುಕ್ತರ ಖಡಕ್ ಎಚ್ಚರಿಕೆ

Khadak warns of city police commissioner

15-12-2017

ಬೆಂಗಳೂರು: ಇನ್ನೇನು ಹೊಸ ವರ್ಷಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ನಗರದಲ್ಲಿ, ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ, ಕ್ರಮವಾಗಿ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ನಗರ ಪೊಲೀಸ್ ಆಯುಕ್ತರು, ಪೊಲೀಸರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕಮಿಷನರ್ ಕಛೇರಿಯಲ್ಲಿ ಸಭೆ ನಡೆಸಿದ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಅವರು, ಈ ಸೂಚನೆ ಹೊರಡಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ನಗರದ ಎಲ್ಲಾ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರು, ಡಿಸಿಪಿಗಳು ಭಾಗಿಯಾಗಿದ್ದರು.

ಕಳೆದ ವರ್ಷ ನಡೆದಂತಹ ಅಹಿತಕರ ಘಟನೆಗಳು ಮರುಕಳಿಸದಂತೆ ಮುಂಜಾಗ್ರತೆ ವಹಿಸಲು ಸೂಚಿಸಿದ್ದಾರೆ. ಆಯಕಟ್ಟಿನ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಕ್ರಮಕೈಗೊಳ್ಳುಬೇಕು, ಬ್ಯಾರಿಕೇಡ್ ಗಳನ್ನು ವ್ಯವಸ್ಥಿತವಾಗಿ ಹಾಕಿ, ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗದಂತೆ ಸುಗಮ ಸಂಚಾರಕ್ಕೆ ಅನುವುಮಾಡಿಕೊಡಬೇಕು ಎಂದು ತಿಳಿಸಿದ್ದಾರೆ.

ಹೊಸ ವರ್ಷಾಚರಣೆಯಲ್ಲಿ ಪಾಲ್ಗೊಳ್ಳುವವರ ರಕ್ಷಣೆಗೆ ಆದ್ಯತೆ ಮತ್ತು ಮಹಿಳೆಯರ ಮೇಲೆ ದೌರ್ಜನ್ಯದಂತಹ ಕೃತ್ಯಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಅಲ್ಲದೇ ಪೊಲೀಸ್ ಅಧಿಕಾರಿಗಳು ವರ್ಗಾವಣೆ ಮತ್ತಿತರ ಕಾರಣಗಳಿಂದ ನುಣುಚಿಕೊಳ್ಳುವಂತಿಲ್ಲ, ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಾಗಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು, ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳುವಂತೆ, ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ