ಸೊಸೆ ಮೇಲೆ ಮಾವನಿಂದ ಅತ್ಯಾಚಾರ

women raped in belagavi

15-12-2017

ಬೆಳಗಾವಿ: ಮಾವನೇ ಸೊಸೆ ಮೇಲೆ ಅತ್ಯಾಚಾರ ಎಸಗಿರುವ ನೀಚ ಕೃತ್ಯ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ. ಅರ್ಜುನ ಪಡಿಸಲಗಿ(50) ಎಂಬಾತ ಈ ಕೃತ್ಯ ಎಸಗಿದ್ದಾನೆ. ಬೆಳಗಾವಿಯ ಜಿಲ್ಲೆಯ ಅಥಣಿ ತಾಲ್ಲೂಕಿನ ಶಿರಹಟ್ಟಿ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ತನ್ನ ಮನೆಯಲ್ಲಿದ್ದ 21 ವರ್ಷದ ಸೊಸೆ ಮೇಲೆ ಮಾವನೇ ಅತ್ಯಾಚಾರ ಎಸಗಿದ್ದಾನೆ. ಈ ಕುರಿತು ಮನನೊಂದ ಯುವತಿ, ತನ್ನ ಮನೆಯವರಿಗೆ ವಿಷಯ ತಿಳಿಸಿದ್ದು, ಯುವತಿಯ ತವರು ಮನೆ ಬಸವನ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಯುವತಿಯ ತಂದೆ, ಮಾವನಾದ ಅರ್ಜುನ ಪಡಿಸಲಗಿ ವಿರುದ್ಧ ದೂರು ದಾಖಲಿಸಿದ್ದಾರೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

 


ಸಂಬಂಧಿತ ಟ್ಯಾಗ್ಗಳು

Rape Belagavi ಮಾವ-ಸೊಸೆ ಅತ್ಯಾಚಾರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ