ದೇವಸ್ಥಾನದ ಹುಂಡಿಗೆ ಕೈ ಹಾಕಿದ ಕಳ್ಳರು

Robbery at temple:Doddaballapura

15-12-2017

ದೊಡ್ಡಬಳ್ಳಾಪುರ: ದೇವಸ್ಥಾನದ ಬಾಗಿಲು ಮುರಿದು ಹುಂಡಿ ದೋಚಿರುವ ಘಟನೆಯು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನ ಆರೂಢಿ ಗ್ರಾಮದ, ಹೊರವಲಯದ ವಡಸಲಮ್ಮ ದೇವಾಲಯದಲ್ಲಿ ಕಳ್ಳರು ಈ ಕೃತ್ಯ ಎಸಗಿದ್ದಾರೆ. ನಿನ್ನೆ ತಡರಾತ್ರಿ ದೇವಾಲಯದ ಕಬ್ಬಿಣದ ಬಾಗಿಲು ಮುರಿದ ಕಳ್ಳರು, ದೇವಸ್ಥಾನದ ಹುಂಡಿಯನ್ನು ಒಡೆದು, ಹಣ ದೋಚಿ ಪರಾರಿಯಾಗಿದ್ದಾರೆ. ಎಂದಿನಂತೆ ಪೂಜಾರಿ ದೇವಸ್ಥಾನಕ್ಕೆ ಬಂದಾಗ ಕಳ್ಳತನ ನಡೆದಿರುವುದು ಗೊತ್ತಾಗಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ. ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಸಂಬಂಧಿತ ಟ್ಯಾಗ್ಗಳು

Robbery at temple Rural ದೇವಸ್ಥಾನ ಗ್ರಾಮಾಂತರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ