ವೇತನಕ್ಕಾಗಿ ವಿಷ ಸೇವಿಸಿದ ವ್ಯಕ್ತಿ

A man consumed poision for salery

15-12-2017

ಮಂಡ್ಯ: 17 ತಿಂಗಳಿಂದ ವೇತನ ನೀಡದೆ ಸತಾಯಿಸುತ್ತಿರುವ ಗ್ರಾಮ ಪಂಚಾಯತಿ ವರ್ತನೆಯಿಂದ ಬೇಸತ್ತ ವಾಟರ್ ಮೆನ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯು, ಮಂಡ್ಯದಲ್ಲಿ ನಡೆದಿದೆ. ಹರೀಶ್ ಎಂಬಾತ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಮಾದಾಪುರ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಮಾದಾಪುರ ಗ್ರಾಮ ಪಂಚಾಯಿತಿಯು ಕಳೆದ 17 ತಿಂಗಳಿಂದ ವಾಟರ್ ಮೆನ್ ಗಳಿಗೆ ವೇತನ ನೀಡದೆ ತಮ್ಮನ್ನು ದುಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ ನಿನ್ನೆ 7 ಮಂದಿ ಪ್ರತಿಭಟನೆ ನಡೆಸಿದ್ದರು. ಇನ್ನು ಪ್ರತಿಭಟನೆಯಿಂದ ಯಾವುದೇ ಪ್ರಯೋಜನವಾಗದಿದ್ದು, ತಮ್ಮ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಪರದಾಡುವಂತಾಗಿದ್ದರು ಸಮಸ್ಯೆ ಆಲಿಸದ ಅಧಿಕಾರಿಗಳ ವಿರುದ್ಧ ಬೇಸತ್ತ ಹರೀಶ್ ವಿಷ ಸೇವಿಸಿದ್ದಾರೆ. ಇದರಿಂದ ಅಸ್ವಸ್ಥಗೊಂಡ ಹರೀಶ್ ನನ್ನು ಕೂಡಲೆ ಚನ್ನರಾಯಪಟ್ಟಣ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿರುವ ಹರೀಶ್ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಕಿಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಸಂಬಂಧಿತ ಟ್ಯಾಗ್ಗಳು

suicide attempt panchayat ಆರ್ಥಿಕ ಆತ್ಮಹತ್ಯೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ