ಕಲಬುರಗಿಯಲ್ಲಿ ಮತ್ತೆ ಗುಂಡಿನ ಸದ್ದು

firing in kalaburgi

15-12-2017

ಕಲಬುರಗಿ: ಕಲಬುರಗಿಯಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದೆ. ದರೋಡೆ ಮತ್ತು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಈ ಘಟನೆಯಲ್ಲಿ ಆರೋಪಿ ಕಾಲಿಗೆ ಗುಂಡು ತಗುಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವು ಪ್ರಕರಣಗಳಲ್ಲಿ ಬೇಕಾಗಿರುವ ಕುಖ್ಯಾತ ರೌಡಿ ಯಶವಂತ್ ಮೇಲೆ ಪೊಲೀಸರು ಪೈರಿಂಗ್ ಮಾಡಿದ್ದಾರೆ. ರೌಡಿ ಯಶವಂತ್ ಮೇಲೆ ಕಣ್ಣಿಟ್ಟಿದ್ದ ಪೊಲೀಸರು, ಈತ ಕಲಬುರಗಿಯ ತಾವರಗೇರಾ ಕ್ರಾಸ್ ಬಳಿ ಇರುವ ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ಎಸ್.ಎಸ್ ಹುಲ್ಲೂರು ನೇತೃತ್ವದಲ್ಲಿ ದಾಳಿ ನಡೆಸಿ, ಬಂಧಿಸಲು ಯತ್ನಿಸಿದ್ದಾರೆ. ಆದರೆ ಈ ವೇಳೆ ಪೊಲೀಸರ ಮೇಲೆಯೇ ಆತ ದಾಳಿಗೆ ಮುಂದಾಗಿದ್ದಾನೆ. ಇನ್ನು ಪೊಲೀಸರಿಂದ ತಪ್ಪಿಸಿಕೊಳ್ಳಲು ಪರಾರಿಯಾಗುತ್ತಿದ್ದ ವೇಳೆ ಪೊಲೀಸರು ಈತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಪೇದೆಗಳಿಗೆ ಗಾಯಗಳಾಗಿವೆ. ರೌಡಿ ಯಶವಂತ್ ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಗಾಯಾಳು ಪೊಲೀಸರು ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಲಬುರಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 


ಸಂಬಂಧಿತ ಟ್ಯಾಗ್ಗಳು

police firing Kalaburagi ಪ್ರಕರಣ ಡಿವೈಎಸ್ಪಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ