‘ಗೋಕಾಕ ಜಿಲ್ಲೆ ರಚನೆಗೆ ನನ್ನ ಬೆಂಬಲ’15-12-2017

ಬೆಳಗಾವಿ: ಬೆಳಗಾವಿ ಜಿಲ್ಲೆ ವಿಭಜಿಸಿ ಪ್ರತ್ಯೇಕ ಜಿಲ್ಲೆ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ, ಗೋಕಾಕ ಜಿಲ್ಲೆ ರಚನೆಗೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು, ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯ ವಿಮಾನ ನಿಲ್ದಾಣದಲ್ಲಿಂದು ಮಾತನಾಡಿದ ಅವರು, ಶೂನ್ಯ ಸಂಪಾದನಮಠದ ಸ್ವಾಮೀಜಿ ನೇತೃತ್ವದಲ್ಲಿ ಪಕ್ಷಾತೀತ ಹೋರಾಟ ನಡೆಯುತ್ತಿದೆ, ಚರ್ಚೆ ನಡೆಸಿ ಸಿಎಂ ಬಳಿ ನಿಯೋಗ ತೆಗೆದುಕೊಂಡು ಹೋಗುತ್ತೇವೆ ಎಂದರು. ಗಡಿ ವಿಷಯ ಸುಪ್ರೀಂ ಕೋರ್ಟ್ನಲ್ಲಿರುವುದರಿಂದ ಕನ್ನಡಿರಿಗೆ ಹಿನ್ನಡೆಯಾಗಬಾರದು, ಮರಾಠಿಗರ ಕೈ ಮೇಲಾಗಬಾರದು ಎಂದು, ಕನ್ನಡ ಹೋರಾಟಗಾರರು ಆತಂಕ ವ್ಯಕ್ತಪಡಿಸಿದ್ದಾರೆ. ಇದೆಲ್ಲವನ್ನ ಗಮನದಲ್ಲಿಟ್ಟುಕೊಂಡು ಜಿಲ್ಲಾ ರಚನೆ ಮಾಡುವುದಾಗಿ ಸಿಎಂ ಭರವಸೆ ನೀಡಿರುವುದಾಗಿ ಹೇಳಿದ್ದಾರೆ ಎಂದು, ಸಚಿವ ರಮೇಶ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ