ವಿಲಾಸಿ ಜೀವನ-ಕಳ್ಳತನ-ಜೈಲು..!

luxury life and robbery gang

15-12-2017

ಬೆಂಗಳೂರು: ವಿಲಾಸಿ ಜೀವನಕ್ಕಾಗಿ ಮನೆಗಳವು ಮಾಡುತ್ತಿದ್ದ ಮೂವರು ಕುಖ್ಯಾತ ಮನೆಗಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು 766 ಗ್ರಾಂ ಚಿನ್ನಾಭರಣಗಳು ಸೇರಿ 23 ಲಕ್ಷ ಮೌಲ್ಯದ ಮಾಲುಗಳನ್ನು ವಶಪಡಿಸಿಕೊಂಡಿದ್ದಾರೆ.

ಆನೇಕಲ್‍ನ ಹಿನ್ನಕ್ಕಿಯ ಗಣೇಶ ಅಲಿಯಾಸ್ ಕಚ್ಚು (25), ಸೀಗೆಹಳ್ಳಿಯ ಪ್ರಕಾಶ್ ಅಲಿಯಾಸ್ ಜಂಗ್ಲಿ (28) ಹಾಗೂ ಕಬ್ಬನ್‍ಪೇಟೆಯ ಗಾಣಿಗರ ಗಲ್ಲಿಯ ಹೇಮಂತ್ ರಾಜ್ ಯಾದವ್ (34) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತ ಗಣೇಶ ಹಾಗೂ ಪ್ರಕಾಶ್‍ನಿಂದ 18 ಲಕ್ಷ ಮೌಲ್ಯದ 590 ಗ್ರಾಂ ಚಿನ್ನಾಭರಣಗಳು, ಇಂಡಿಕಾ ಕಾರೊಂದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ದಕ್ಷಿಣ ವಿಭಾಗದ ಡಿಸಿಪಿ ಡಾ.ಶರಣಪ್ಪ ತಿಳಿಸಿದ್ದಾರೆ.

ಅನ್ನಪೂರ್ಣೇಶ್ವರಿ ನಗರ, ವಿಜಯನಗರ ಸೇರಿದಂತೆ ನಗರದ ವಿವಿಧ ಠಾಣೆಗಳಲ್ಲಿ ಆರೋಪಿಗಳು ಮನೆಗಳವು ಕೃತ್ಯದಲ್ಲಿ ಭಾಗಿಯಾಗಿರುವ ಮಾಹಿತಿ ಇದೆ. ಆರೋಪಿಗಳ ಬಂಧನದಿಂದ 3 ಮನೆಗಳವು ಪ್ರಕರಣಗಳು ಪತ್ತೆಯಾಗಿವೆ. ಮತ್ತೊಬ್ಬ ಆರೋಪಿ ಹೇಮಂತ್ ರಾಜ್‍ನಿಂದ 5 ಲಕ್ಷ ಮೌಲ್ಯದ 167 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು. ಚನ್ನಮ್ಮನ ಕೆರೆ ಅಚ್ಚುಕಟ್ಟುವಿನಲ್ಲಿ ನಡೆದಿದ್ದ ಮನೆಗಳವು ಪ್ರಕರಣವೊಂದನ್ನು ದಾಖಲಿಸಿ, ತನಿಖೆ ಕೈಗೊಂಡಿದ್ದ ಪೊಲೀಸ್ ಇನ್ಸ್ ಪೆಕ್ಟರ್ ಕೃಷ್ಣ ಮತ್ತವರ ಸಿಬ್ಬಂದಿ ಖಚಿತ ಮಾಹಿತಿ ಮೇರೆಗೆ ಮೂವರು ಆರೋಪಿಗಳನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

robbery gang luxury life ಆರೋಪಿ ವಿಜಯನಗರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ