ಸೋಲಿನ ಬಗ್ಗೆ ಬೇಸರ ಇಲ್ಲ : ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ

Kannada News

13-04-2017

ಬೆಂಗಳೂರು: ನಂಜನಗೂಡು, ಗುಂಡ್ಲುಪೇಟೆ ಎರಡೂ ಕ್ಷೇತ್ರಗಳಲ್ಲಿ ನಾವು ಎಂದೂ ಗೆಲುವು ಸಾಧಿಸಿಲ್ಲ. ಹೀಗಾಗಿ ಈ ಬಾರಿ ನಾವು ಇದನ್ನ ಸವಾಲಾಗಿ ಸ್ವೀಕಾರ ಮಾಡಿದ್ವಿ. ಆದರೆ ಯಾವುದೇ ಕಾರಣಕ್ಕೂ ಸೋಲಿನ ಬಗ್ಗೆ ಬೇಸರ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಫಲಿತಾಂಶದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಸೋಲಿನ ಬಗ್ಗೆ ನಮಗೆ ಬೇಸರ ಇಲ್ಲ. ನಮ್ಮ 150 ಸ್ಥಾನವನ್ನು ಗೆಲ್ಲುವ ಗುರಿಯನ್ನು ನಿಶ್ಚಿತವಾಗಿ ಮಾಡೇ ಮಾಡ್ತೀವಿ. ಇನ್ನು ಮುಂದೆ ಯಾವುದೇ ಹಿನ್ನಡೆಯಾಗುವುದಿಲ್ಲ. ಉಪ ಚುನಾವಣೆಯಲ್ಲಿ ಗೆದ್ದ ತಕ್ಷಣ ರಾಜ್ಯದ ಜನ ಕಾಂಗ್ರೆಸ್ ಪರ ಇದ್ದಾರೆ ಅಂತೇನಲ್ಲ. ಈ ಚುನಾವಣೆ 2018ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗುವುದಿಲ್ಲ ಎಂದು ತಿಳಿಸಿದರು.

ಉಪಚುನಾವಣೆ ಗೆಲುವಿನ ಕಾರಣಕ್ಕಾಗಿ ಹಗುರ ಮಾತುಗಳಿಂದ ಕಾಂಗ್ರೆಸ್ಸಿನವರು ಯಶಸ್ಸು ಸಾಧಿಸಲು ಸಾಧ್ಯವಿಲ್ಲ. ಈ ರೀತಿ ಮಾಡುವುದರಿಂದ ಅವರ ಮೇಲಿದ್ದ ಗೌರವ ಇನ್ನು ಕಡಿಮೆಯಾಗುತ್ತಾ ಹೋಗುತ್ತದೆ ಎಂದರು.

Links :
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ