‘ಕಾಂಗ್ರೆಸ್ ಒಂದೊಂದೇ ರಾಜ್ಯ ಕಳೆದುಕೊಳ್ಳುತ್ತಿದೆ’18-12-2017

ಬೆಂಗಳೂರು: ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದೆ ಎಂದು, ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್ ಹೇಳಿದ್ದಾರೆ. ಚುನಾವಣಾ ಫಲಿತಾಂಶ ಹಿನ್ನೆಲೆ ಪ್ರತಿಕ್ರಿಸಿದ ಅವರು,  ಒಂದೊಂದೇ ರಾಜ್ಯವನ್ನು ಕಾಂಗ್ರೆಸ್ ಕಳೆದುಕೊಳ್ಳುತ್ತಿದೆ, ಕಾಂಗ್ರೆಸ್ ಮುಕ್ತ ಭಾರತದ ಮುನ್ಸೂಚನೆ ಇಂದಿನ ಫಲಿತಾಂಶ ಎಂದು ಹೇಳಿದ್ದಾರೆ. ಅಲ್ಲದೇ ಗುಜರಾತ್ ನಲ್ಲಿ ಇನ್ನೂ ಹೆಚ್ಚಿನ ಸ್ಥಾನ ಗೆಲ್ಲುವ ಸಾಧ್ಯತೆ ಇತ್ತು. ಹಿಮಾಚಲ-ಗುಜರಾತ್ ನಲ್ಲಿ ಏನಾಗಿದೆಯೋ ಅದೇ ರೀತಿ ಕರ್ನಾಟಕದಲ್ಲೂ ಆಗಲಿದೆ. ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದಿದ್ದಾರೆ.

ಇನ್ನು ಚುನಾವಣಾ ಫಲಿತಾಂಶದ ಕುರಿತು, ಬಳ್ಳಾರಿಯಲ್ಲಿ ಮಾಜಿ ಶಾಸಕ ಸೋಮಶೇಖರ್ ಅವರು ಪ್ರತಿಕ್ರಿಯಿಸಿದ್ದು, ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ, ಅದು ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರ ಶ್ರಮವಾಗಿದೆ ಎಂದರು. ದೇಶವೆಲ್ಲ ಬಿಜೆಪಿಮಯವಾಗುತ್ತಿದೆ, ಕರ್ನಾಟಕ ಕೂಡ ಆಗುತ್ತೇ, ನಮಗೆ ಭರವಸೆ ಇದೆ ಎಂದಿದ್ದಾರೆ. ಅಭಿವೃದ್ಧಿಯನ್ನು ನೋಡಿ ಜನರು ಅಭಿವೃದ್ಧಿಗೆ ಮತ ನೀಡಿದ್ದಾರೆ, ರಾಜ್ಯದಲ್ಲಿ ಮುಂಬರುವ ಚುನಾವಣೆಯಲ್ಲೂ ಕೂಡ ಬಿಜೆಪಿ ಜಯಭೇರಿ ಬಾರಿಸುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ