ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

BJP activists celebrattions

18-12-2017

ಬೆಂಗಳೂರು: ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಜೆ ಜಯಭೇರಿ ಬಾರಿಸಿದ ಹಿನ್ನೆಲೆ, ಬೆಂಗಳೂರು ಗ್ರಾಮಾಂತರ ನೆಲಮಂಗಲದಲ್ಲಿ ಬಿಜೆಪಿ ಕಾರ್ಯಕರ್ತರು, ಸಂಭ್ರಮಾಚರಣೆ ಮಾಡಿದ್ದಾರೆ. ನೆಲಮಂಗಲ ಪಟ್ಟಣದ ಬಿಜೆಪಿ ಕಚೇರಿ ಮುಂದೆ ಕಾರ್ಯಕರ್ತರು, ಕುಣಿದು ಕುಪ್ಪಳಿಸಿದ್ದಾರೆ. ಮಾಜಿ ಶಾಸಕ ನಾಗರಾಜು ನೇತೃತ್ವದಲ್ಲಿ ಸಂಭ್ರಮಾಚರಣೆ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿಗೆ ಜೈಕಾರದ ಘೋಷಣೆಗಳನ್ನು ಕೂಗಿದ್ದಾರೆ.

ಇನ್ನು ಬೆಳಗಾವಿಯಲ್ಲಿ, ಶಾಸಕ ಅಭಯ ಪಾಟೀಲ್ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು, ಗುಜರಾತ್ ನ ಗೆಲುವಿನ ಹಿನ್ನೆಲೆ ಬೆಳಗಾವಿ ಬಿಜೆಪಿ ಕಚೇರಿ ಮುಂದೆ ಸಂಭ್ರಮಾಚರಣೆ ಆಚರಿಸಿದ್ದಾರೆ. ಬೆಳಗಾವಿಯ ದಕ್ಷಿಣ ಕ್ಷೇತ್ರದ ವಿಧಾನಸಭಾ ಕಚೇರಿ ಮಂಭಾಗದಲ್ಲಿ, ಪರಸ್ಪರ ಬಣ್ಣ ಎರಚುತ್ತಾ ತಮಟೆ ಬಾರಿಸುತ್ತಾ ಸಂಭ್ರಮಿಸಿದರು. ಮಹಿಳಾ ಕಾರ್ಯಕರ್ತರು ಕೂಡಾ ತಮಟೆ ಸದ್ದಿಗೆ ಸ್ಟೆಪ್ ಹಾಕಿ ಖುಷಿ ಪಟ್ಟರು, ಇನ್ನು ಸಂಭ್ರಮಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ, ಬಿ.ಎಸ್.ಯಡಿಯೂರಪ್ಪನವರಿಗೆ ಜೈಕಾರ ಕೂಗಿದರು. ಅಲ್ಲದೇ ಕೊಪ್ಪಳದಲ್ಲೂ ಸಹ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದಾರೆ. ಕೊಪ್ಪಳ ನಗರದ ಅಶೋಕ್ ಸರ್ಕಲ್ ನಲ್ಲಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ