ಬಸ್ ಅಪಘಾತ 25 ಮಂದಿಗೆ ಗಾಯ

25 injured in bus accident

18-12-2017

ಬೆಂಗಳೂರು: ಕುಮಾರಸ್ವಾಮಿ ಲೇಔಟ್‍ನ ನೈಸ್ ರಸ್ತೆಯ ಮೇಲುಸೇತುವೆ ಬಳಿ, ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದು ಯುವಕನೊಬ್ಬ ಮೃತಪಟ್ಟರೆ, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟವರನ್ನು ಅತ್ತಿಬೆಲೆಯ ಭರತ್(25) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ 25 ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ.

ಅತ್ತಿಬೆಲೆಯ ಆಶೀರ್ವಾದ್ ಪೈಪ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಶಿವಮೊಗ್ಗ ಮೂಲದ ಭರತ್ ಸೇರಿ 100ಕ್ಕೂ ಹೆಚ್ಚು ಮಂದಿಯನ್ನು ಕಂಪನಿಯು ಮೂರು ಬಸ್‍ಗಳಲ್ಲಿ ಗೋವಾ ಪ್ರವಾಸಕ್ಕೆ ಕಳುಹಿಸಿಕೊಟ್ಟಿತ್ತು. ಪ್ರವಾಸ ಮುಗಿಸಿಕೊಂಡು ರಾತ್ರಿ 9.45ರ ವೇಳೆ ಅತ್ತಿಬೆಲೆಗೆ ವಾಪಾಸ್ ಆಗುತ್ತಿದ್ದವರಲ್ಲಿ ಭರತ್ ಅವರಿದ್ದ ಬಸ್ ನೈಸ್ ರಸ್ತೆಯ ಮೇಲುಸೇತುವೆಯ ಬಳಿ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಭರತ್ ಸ್ಥಳದಲ್ಲೇ ಮೃತಪಟ್ಟಿದ್ದು, ಬಸ್ ಚಾಲಕ ಸೇರಿದಂತೆ, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸರು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ,ಪರಿಹಾರ ಕಾರ್ಯ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Accident Bus and lorry ಕಂಪನಿ ನೈಸ್ ರಸ್ತೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ