ಶಿವಮೊಗ್ಗದಲ್ಲಿ ಪೊಲೀಸ್ ಬಂದೋಬಸ್ತ್

Police high protection in Shimoga

19-12-2017

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿಂದು ಹಿಂದು ಸಂರಕ್ಷಣಾ ವೇದಿಕೆಯ ಪ್ರತಿಭಟನೆ ಹಿನ್ನೆಲೆ, ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ಡಿಸಿ ಕಚೇರಿ ವರೆಗೂ, ಹಿಂದು ಸಂರಕ್ಷಣಾ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ. ಇದರಿಂದ ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಶಿವಮೊಗ್ಗ , ಚಿತ್ರದುರ್ಗ,ಹಾವೇರಿ, ದಾವಣಗೆರೆ ಜಿಲ್ಲೆಯಿಂದ ಪೊಲೀಸ್ ಸಿಬ್ಬಂದಿ ರಕ್ಷಣೆಗೆ ಆಗಮಿಸಿದ್ದಾರೆ. 105 ಸಿ.ಸಿ ಕ್ಯಾಮೆರಾ, 40 ಚೆಕ್ ಪೊಸ್ಟ್, ಕೆಎಸ್ಆರ್ ಪಿ ತುಕಡಿ 7, ಡಿಎಆರ್ 15, ಎಎನ್ಎಸ್ 1. ಸೇರಿದಂತೆ ಬಿಗಿ ಬಂದೊ ಬಸ್ತ್ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಸ್ಪಿ ಅಭಿನವ್ ಖರೆ ನೇತೃತ್ವದಲ್ಲಿ ಮುಂಜಾಗ್ರತಾ ಕ್ರಮಗಳನ್ನು  ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ