ಹತ್ಯೆ ಖಂಡಿಸಿ ಪ್ರತಿಭಟನೆ

BJP Protest against congress

19-12-2017

ಬೆಂಗಳೂರು: ರಾಜ್ಯದಲ್ಲಿ ಹಿಂದು ಕಾರ್ಯಕರ್ತರ ಹತ್ಯೆ ಖಂಡಿಸಿ, ಹಿಂದು ಹಿತರಕ್ಷಣಾ ಸಮಿತಿಯಿಂದ, ಬೆಂಗಳೂರಿನ ಮಲ್ಲೇಶ್ವರಂ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹಿಂದೂ ಕಾರ್ಯಕರ್ತರ ಹತ್ಯೆಗೆ ಕಾರಣವಾದ ಸಂಘಟನೆಗಳನ್ನು ನಿಷೇಧಿಸಲು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಪಿಎಫ್ ಐ ಮತ್ತು ಕೆಎಫ್ ಡಿ ಸಂಘಟನೆ ನಿಷೇಧಕ್ಕೆ ಒತ್ತಾಯಿಸಿದ್ದಾರೆ. ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕ ಡಾ.ಅಶ್ವಥನಾರಾಯಣ ಪಾಲ್ಗೊಂಡು, ಮಾತನಾಡಿದ ಅವರು, ರಾಜ್ಯದಲ್ಲಿ ಪರೇಶ್ ಮೇಸ್ತ ಸೇರಿದಂತೆ ಹಲವಾರು ಹಿಂದೂ ಕಾರ್ಯಕರ್ತರ ಹತ್ಯೆ ನಡೆದಿದೆ, ಹತ್ಯೆ ಹಿಂದಿನ ಶಕ್ತಿಗಳನ್ನು ಸರ್ಕಾರ ಪತ್ತೆ ಹಚ್ಚಬೇಕಾಗಿದೆ ಎಂದು ಆಗ್ರಹಿಸಿದ್ದಾರೆ. ಹಿಂದೂ ಕಾರ್ಯಕರ್ತರ ಹತ್ಯೆಯಲ್ಲಿ ಪಿಎಫ್ಐ ಮತ್ತು ಕೆಎಫ್ ಡಿ ಸಂಘಟನೆಗಳ ಕೈವಾಡ ಬಗ್ಗೆ ರುಜುವಾಗಿದೆ ಎಂದ ಅವರು, ಈ ಎರಡು ಸಂಘಟನೆಗಳನ್ನು ರಾಜ್ಯದಲ್ಲಿ ನಿಷೇಧ ಮಾಡಬೇಕು ಎಂದಿದ್ದಾರೆ.

ಕಾಂಗ್ರೆಸ್ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ಈ ಸಂಘಟನೆಗಳನ್ನು ಪೋಷಿಸುವ ಕೆಲಸ ಮಾಡುತ್ತಿವೆ ಎಂದು, ಪೊಲೀಸ್ ಇಲಾಖೆ ವಿರುದ್ಧವೂ ಕಿಡಿಕಾರಿದ್ದಾರೆ. ಹಿಂದೂ ಕಾರ್ಯಕರ್ತರ ಹತ್ಯೆ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಸರಿಯಾದ ಕರ್ತವ್ಯ ನಿರ್ವಹಿಸುತ್ತಿಲ್ಲ, ರಾಜ್ಯ ಸರ್ಕಾರದ ಅಣತಿಯಂತೆ ಪ್ರಕರಣದ ದಿಕ್ಕು ತಪ್ಪಿಸುವ ಕಾರ್ಯ ನಡೆಯುತ್ತಿದೆ, ಹಿಂದೂ ವಿರೋಧಿ ನಿಲುವನ್ನು ರಾಜ್ಯ ಸರ್ಕಾರ ತಳೆಯುತ್ತಿದೆ ಎಂದು ಆಕ್ರೋಶಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ