ಕೊಪ್ಪಳದ ಹನುಮಸಾಗರ ಬಂದ್

Koppal: Hanumasagar Band

20-12-2017

ಕೊಪ್ಪಳ: ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲ್ಲೂಕಿನ ಹನುಮಸಾಗರವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸುವಂತೆ ಆಗ್ರಹಿಸಿ, ಹನುಮಸಾಗರ ತಾಲ್ಲೂಕು ಹೋರಾಟ ಸಮಿತಿ ಬಂದ್ ಗೆ ಕರೆ ನೀಡಿ ಪ್ರತಿಭಟನೆ ನಡೆಸಿದ್ದಾರೆ. ಇನ್ನು ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಿಗ್ಗೆಯಿಂದಲೇ ಸಾರಿಗೆ ಬಸ್, ವಾಹನ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಸಾರ್ವಜನಿಕರು ಪರದಾಡವಂತಾಗಿದೆ. ಅಲ್ಲದೇ ವ್ಯಾಪಾರ-ವಹಿವಾಟು ಸ್ಥಗಿತಗೊಳಿಸಿ ಬಂದ್ ಗೆ ವ್ಯಾಪಾರಿಗಳು ಬೆಂಬಲ ಸೂಚಿಸಿದ್ದಾರೆ. ಅನರ್ಹ ಗ್ರಾಮಗಳನ್ನು ತಾಲ್ಲೂಕು ಕೇಂದ್ರಗಳನ್ನಾಗಿ ಸರ್ಕಾರ ಘೋಷಣೆ ಮಾಡಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಹನುಮಸಾಗರವನ್ನು ತಾಲ್ಲೂಕು ಮಾಡದಿದ್ದರೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ ಮಾಡುವುದಾಗಿ ಹನುಮಸಾಗರ ತಾಲ್ಲೂಕು ಹೋರಾಟ ಸಮಿತಿ ಎಚ್ಚರಿಕೆ ನೀಡಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ