ಕಾಂಗ್ರೆಸ್ ಮುಖಂಡನಿಗೆ ಐಟಿ ಬಿಸಿ

IT raid in koppal

20-12-2017

ಕೊಪ್ಪಳ: ಮತ್ತೆ ಕಾಂಗ್ರೆಸ್ ಮುಖಂಡರಿಗೆ ಐಟಿ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಕೊಪ್ಪಳದ ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿಯಾದ ಶ್ರೀನಿವಾಸ್ ಗುಪ್ತಾ ಎಂಬುವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೊಪ್ಪಳದ ಭಾಗ್ಯನಗರದಲ್ಲಿರುವ ಮನೆ, ಕಚೇರಿಯಲ್ಲಿ ಐಟಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಬೆಳಿಗ್ಗೆ ಸುಮಾರು 6 ಗಂಟೆಗೆ ಖಾಸಗಿ ವಾಹನದಲ್ಲಿ ಬಂದ ಅಧಿಕಾರಿಗಳು, ಮನೆ ಮತ್ತು ಫ್ಯಾಕ್ಟರಿಯ ಪ್ರಮುಖ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

IT Raid Congress Leader ಆದಾಯ ತೆರಿಗೆ ಭಾಗ್ಯನಗರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ