ಬ್ಯಾಂಕ್ ದರೋಡೆಗೆ ಯತ್ನ

Attempt to bank robbery

20-12-2017

ಬೆಂಗಳೂರು: ಬೆಂಗಳೂರು ಗ್ರಾಮಾಂತರ ನೆಲಮಂಗಲದಲ್ಲಿ ಬ್ಯಾಂಕ್ ದರೋಡೆಗೆ ಯತ್ನ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ನೆಲಮಂಗಲ ಸಮೀಪದ ಸೊಂಡೇಕುಪ್ಪ ಗ್ರಾಮದಲ್ಲಿನ ಕೋಟಕ್ ಮಹೇಂದ್ರ ಬ್ಯಾಂಕ್ ನಲ್ಲಿ ಕಳ್ಳರು ಈ ಕೃತ್ಯ ಎಸಗಿದ್ದಾರೆ. ಬ್ಯಾಂಕ್ ಗೆ ಹಾಕಿದ್ದ ಬೀಗ ಒಡೆದು ಒಳ ನುಗ್ಗಿರುವ ಕಳ್ಳರು, ಬ್ಯಾಂಕ್ ನಲ್ಲಿರುವ ವಸ್ತುಗಳನ್ನೆಲ್ಲಾ ಚೆಲ್ಲಾಪಿಲ್ಲಿ ಮಾಡಿ ಹಣಕ್ಕಾಗಿ ಶೋಧ ನಡೆಸಿದ್ದಾರೆ. ಹಣ ದೊರಕದ ಹಿನ್ನೆಲೆ ಬರಿಗೈನಲ್ಲಿ ವಾಪಸ್ ಆಗಿದ್ದು, ಇನ್ನು ಬ್ಯಾಂಕ್ ಪಕ್ಕದಲ್ಲೇ ಇದ್ದ ಎರಡು ಮನೆಗಳಲ್ಲಿ ಕಳ್ಳತನ ನಡೆಸಿದ್ದಾರೆ. ಮನೆಯ ಬಾಗಿಲು ಮುರಿದು, ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ. ನೆಲಮಂಗಲದ ಮಾದನಾಕನಹಳ್ಳಿ ಪೊಲೀಸರಿಗೆ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಕಳ್ಳರಿಗಾಗಿ ಬಲೆ ಬೀಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Bank robbery Bangalore Rural ಬ್ಯಾಂಕ್ ನೆಲಮಂಗಲ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ