ಪುಟ್ಟರಾಜು ವಿರುದ್ಧ ತನಿಖೆಗೆ ಆದೇಶ

Investigation against MP Puttaraju

21-12-2017

ಮಂಡ್ಯ: ಅರಣ್ಯ ಪ್ರದೇಶದಲ್ಲಿ ಅಕ್ರಮ ಕಲ್ಲುಗಣಿಗಾರಿಕೆ ನಡೆಸಿದ ಆರೋಪ ಹಿನ್ನೆಲೆ, ಜೆಡಿಎಸ್ ಸಂಸದ ಪುಟ್ಟರಾಜು ವಿರುದ್ಧ ತನಿಖೆಗೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾದ ಡಾ.ಕೆ.ಎಸ್.ಮೂರ್ತಿ ಅವರು, ಆದೇಶ ನೀಡಿದ್ದಾರೆ. ಅರಣ್ಯ ಇಲಾಖೆ ಜಾಗೃತ ದಳದಿಂದ ತನಿಖೆ ಮಾಡಲು ಸೂಚಿಸಿದ್ದಾರೆ. ಅಕ್ರಮ ಗಣಿಗಾರಿಕೆ ಕುರಿತು ಆರ್‌ಟಿಐ ಕಾರ್ಯಕರ್ತ ರವೀಂದ್ರ ಅವರು, 99 ಪುಟಗಳ ದಾಖಲೆ ಸಮೇತ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದರು. ದೂರಿನ ಹಿನ್ನೆಲೆ ತನಿಖೆಗೆ ಆದೇಶ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಬೇಬಿ ಬೆಟ್ಟ, ಚಿನಕುರಳಿ, ಹೊನಗಾನಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಗೆ, ಸಿ ಫಾರಂ ಇಲ್ಲದಿದ್ದರಿಂದ ಎರಡು ತಿಂಗಳ ಕಾಲ ಜಿಲ್ಲಾಡಳಿದ ನಿಷೇದಾಜ್ಞೆ ಹೇರಿತ್ತು. ಜೆಡಿಎಸ್ ಸಂಸದ ಪುಟ್ಟರಾಜು ಷೇರು ಇರುವ ಕಂಪನಿ ಸೇರಿದಂತೆ ಹಲವು ಕಂಪನಿಗಳಿಂದ ಅಕ್ರಮದ ಆರೋಪ ಕೇಳಿಬಂದಿದ್ದು, ತನಿಖೆಗೆ ಆದೇಶಿಸಿ, ಹದಿನೈದು ದಿನಗಳಲ್ಲಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ