ಸ್ಮಶಾನದಲ್ಲಿ ವ್ಯಕ್ತಿ ಭೀಕರ ಕೊಲೆ

horrific murder in cemetery

21-12-2017

ಬೆಂಗಳೂರು: ಸ್ಮಶಾನದಲ್ಲಿ ವ್ಯಕ್ತಿಯೊಬ್ಬರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ದುರ್ಘಟನೆ ನಿನ್ನೆ ರಾತ್ರಿ ಮಡಿವಾಳದ ವೆಂಕಟಾಪುರದಲ್ಲಿ ನಡೆದಿದೆ. ಸುಮಾರು 35 ವರ್ಷದ ಕೊಲೆಯಾಗಿರುವ ವ್ಯಕ್ತಿಯ ಹೆಸರು, ವಿಳಾಸ ಸದ್ಯಕ್ಕೆ ತಿಳಿದು ಬಂದಿಲ್ಲ. ರಾತ್ರಿ ನಾಲ್ಕೈದು ಮಂದಿ ಸ್ಮಶಾನದಲ್ಲಿ ಕುಡಿದಿದ್ದು, ಕುಡಿದ ಅಮಲಿನಲ್ಲಿ ಗಲಾಟೆ ಮಾಡಿಕೊಂಡು ಈ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.

ಕೊಲೆಯಾದ ವ್ಯಕ್ತಿಯು ಉತ್ತರ ಭಾರತೀಯ ಮೂಲದ ಕೂಲಿ ಕಾರ್ಮಿಕನೆಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಪ್ರಕರಣ ದಾಖಲಿಸಿರುವ ಮಡಿವಾಳ ಪೊಲೀಸರು ದುಷ್ಕರ್ಮಿಗಳಿಗಾಗಿ ತೀವ್ರ ಶೋಧ ನಡೆಸಿದ್ದಾರೆ ಎಂದು ಡಿಸಿಪಿ ಡಾ. ಬೋರಲಿಂಗಯ್ಯ ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Murder Cemetery ಸ್ಮಶಾನ ಗಲಾಟೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ