ಮಂಗಳೂರಲ್ಲಿ ರಾಣಿ ಅಬ್ಬಕ್ಕ ಉತ್ಸವ

Queen Abbakka Festival in Mangalore

21-12-2017 288

ಬೆಂಗಳೂರು: ಮಂಗಳೂರು ತಾಲ್ಲೂಕಿನ ಕೊಲ್ಯದಲ್ಲಿ ಬರುವ ಫೆಬ್ರವರಿ 3 ಮತ್ತು 4ರಂದು ವೀರ ರಾಣಿ ಅಬ್ಬಕ್ಕ ಉತ್ಸವ ಆಚರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ. ಮಂಗಳೂರಿನಲ್ಲಿಂದು ಮಾತನಾಡಿದ ಅವರು, ಉತ್ಸವಕ್ಕೆ ರಾಜ್ಯ ಸರ್ಕಾರ 50 ಲಕ್ಷ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ ಎಂದರು.

ಇದೇ ವೇಳೆ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಯು.ಟಿ. ಖಾದರ್ ಮಾತನಾಡಿ, ಈ ಅನುದಾನದಲ್ಲಿ 30 ಲಕ್ಷ ರೂಪಾಯಿಗಳನ್ನು ಜಿಲ್ಲೆಯಲ್ಲಿ ನಡೆಯುವ ಅಬ್ಬಕ್ಕ ಉತ್ಸವಕ್ಕೆ, 8 ಲಕ್ಷ ರೂಪಾಯಿಯನ್ನು ಮೈಸೂರಿನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಹಾಗೂ ಉಳಿದ 12 ಲಕ್ಷ ರೂಪಾಯಿಯನ್ನು ನವದೆಹಲಿಯಲ್ಲಿ ನಡೆಯುವ ಉತ್ಸವಕ್ಕೆ ವಿನಿಯೋಗಿಸಲಾಗುವುದು ಎಂದರು. ಉಳ್ಳಾಲದಲ್ಲಿ 8 ಕೋಟಿ ರೂಪಾಯಿ ವೆಚ್ಚದಲ್ಲಿ ಅಬ್ಬಕ್ಕ ಭವನ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಸಚಿವ ಖಾದರ್ ತಿಳಿಸಿದರು.ಸಂಬಂಧಿತ ಟ್ಯಾಗ್ಗಳು

Ramanath Rai U.T.Khader ರಾಣಿ ಅಬ್ಬಕ್ಕ ಅನುದಾನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ